ಬೆಂಗಳೂರು; ಮಹಿಳೆಯರಿಗೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿ ಮಾಡಿ ಅವರಲ್ಲಿ ಶಕ್ತಿ ನೀಡಲು ಸರ್ಕಾರವು ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸಾರಿಗೆ ಇಲಾಖೆಯು ಶಕ್ತಿ ಗ್ಯಾರಂಟಿಗೆ ಶತಕೋಟಿ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ಜೂನ್ 11 ರಂದು ಶಕ್ತಿ ಯೋಜನೆ ಜಾರಿಗೆ ಬಂದಿದ್ದು ನವಂಬರ್ 23 ರವರೆಗೆ 100 ಕೋಟಿ 47 ಲಕ್ಷ ಮಹಿಳೆಯರು ಪ್ರಯಾಣ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಬಸ್ ಪ್ರಯಾಣಿಕರಲ್ಲಿ ಶೇ.55 ರಷ್ಟು ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿ ಮಾಡಿ ಅವರಲ್ಲಿ ಶಕ್ತಿ ನೀಡಲು ಸರ್ಕಾರವು ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.
ಗೃಹ ಜ್ಯೋತಿ ಯೋಜನೆಯಡಿಯಲ್ಲಿ 200 ಯುನಿಟ್ ವಿದ್ಯುತ್‍ಅನ್ನು ಉಚಿತವಾಗಿ ನೀಡಲಾಗುತ್ತಿದೆ. ಮಹಿಳೆಯರನ್ನು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರನ್ನಾಗಿ ಮಾಡುವುದು ಸರ್ಕಾರದ ಗುರಿಯಾಗಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯಡಿ 1 ಕೋಟಿ 17 ಲಕ್ಷ ಮಹಿಳೆಯರು ನೋಂದಣಿ ಮಾಡಿದ್ದಾರೆ. 1 ಕೋಟಿ 10 ಲಕ್ಷ ಮಹಿಳೆಯರು ತಿಂಗಳಿಗೆ ರೂ. 2000 ತಲುಪುತ್ತಿದೆ. ಜಾತಿ ಧರ್ಮದ ಬೇದ – ಭಾವವಿಲ್ಲದೆ ಎಲ್ಲಾ ಜಾತಿಯ ಮಹಿಳೆಯರು ಸೌಲಭ್ಯವನ್ನು ಪಡೆಯುತ್ತಿದ್ದಾರೆ.
ಬಡವರಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಬೇಕು. ಆಗ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಆರ್ಥಿಕ ಚೈತನ್ಯ ನೀಡುವ ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಸರ್ಕಾರವು ರೂಪಿಸಿದೆ. ಕೆರೆಯ ನೀರನ್ನು ಕೆರೆಗೆ ಚೆಲ್ಲುವ ರೀತಿ ಜನರ ತೆರಿಗೆ ಹಣವನ್ನು ಜನರಿಗೆ ತಲುಪಿಸುವ ಕೆಲಸವನ್ನು ಸರ್ಕಾರವು ಮಾಡುತ್ತಿದೆ ಎಂದು ತಿಳಿಸಿ ನಂತರ ಮುಖ್ಯಮಂತ್ರಿಗಳು ಸಾರಿಗೆ ಸಂಸ್ಥೆಗಳ ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ ನೌಕರರ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ರೂ 3 ಲಕ್ಷ ದಿಂದ ರೂ. 10 ಲಕ್ಷಕ್ಕೆ ಹೆಚ್ಚಿಸಲಾಗಿದೆ. ರೂ. 1 ಕೋಟಿ ಅಪಘಾತ ಪರಿಹಾರ ಸಾರಿಗೆ ಸುರಕ್ಷಾ ವಿಮಾ ಯೋಜನೆ ಜಾರಿಯಾಗಿದೆ. ಸಂಸ್ಥೆಯ ಸಿಬ್ಬಂದಿಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನದ ಧನಸಹಾಯ ಮೊತ್ತವನ್ನು ಹೆಚ್ಚಿಸಿ, ಆನ್‍ಲೈನ್ ವ್ಯವಸ್ಥೆಯೊಂದಿಗೆ ವಿದ್ಯಾ ಚೇತನ ಯೋಜನೆ ಜಾರಿ ಮಾಡಲಾಗಿದೆ ಎಂದರು.
ಗೃಹ ಸಚಿವ ಪರಮೇಶ್ವರ್ ಅವರು ಮಾತನಾಡಿ ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಸಂಸ್ಥೆಗಳು ದೇಶದಲ್ಲಿ ಮಾದರಿಯಾಗಿದ್ದಾರೆ. ಸಾವಿರಾರು ಸಿಬ್ಬಂದಿ ವರ್ಗದವರು ಪ್ರಾಮಾಣಿಕ ಕೆಲಸ ಮಾಡಿರುವುದರಿಂದ ಸಾರಿಗೆ ಸಂಸ್ಥೆಗೆ ಕೀರ್ತಿ ಬಂದಿದೆ. ಸರ್ಕಾರದ ಉದ್ದೇಶವು ಮಹಿಳೆಯರನ್ನು ಸಬಲೀಕರಣರನ್ನಾಗಿ ಮಾಡಬೇಕು ಹಾಗೂ ಮುಖ್ಯವಾಹಿನಿಗೆ ಬರಬೇಕು ಎಂಬ ಉದ್ದೇಶದಿಂದ ವಿವಿಧ ಯೋಜನೆಯನ್ನು ರೂಪಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಎನ್. ವಿ. ಪ್ರಸಾದ್ ಸೇರಿದಂತೆ ಹಿರಿಯ ಗಣ್ಯರು, ಸಾರಿಗೆ ಇಲಾಖೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.