ಎಸ್‍ಸಿಎಸ್‍ಪಿ/ಟಿಎಸ್‍ಪಿ ಅನುದಾನ ಸಮರ್ಪಕವಾಗಿ ಬಳಕೆಮಾಡಿಕೊಳ್ಳಲು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ

0
47

ಕಲಬುರುಗಿ: ನ. 22; 2023-24ನೇ ಸಾಲಿನ ಎಸ್‍ಸಿಎಸ್‍ಪಿ/ಟಿಎಸ್‍ಪಿ ಅನುದಾನ ಸಮರ್ಪಕವಾಗಿ ಬಳಕೆಮಾಡಿಕೊಳ್ಳಲು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್‍ಸಿಎಸ್‍ಪಿ/ಟಿಎಸ್‍ಪಿ ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳಿಸುತ್ತಿರುವ ಕುರಿತು ಜಿಲ್ಲಾಮಟ್ಟದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಲಾಖೆಗಳು ಅನುದಾನ ಸಮರ್ಪಕ ಬಳಕೆ ಮಾಡಿಕೊಂಡು ತಮಗೆ ನೀಡಿರುವ ಸಮಯದಲ್ಲಿ ಮುಗಿಸಲು ಸೂಚನೆ ನೀಡಿದರು. ಅಧಿಕಾರಿಗಳಿಗಳು ನಿರ್ಲಕ್ಷ್ಯ ವಹಿಸಿದ್ದರೆ ಶಿಸ್ತಿನ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಅಧಿಕಾರಿಗಳಿಗೆ ಎಚ್ಚರಿಸಿದ್ದರು.

Contact Your\'s Advertisement; 9902492681

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಸಂಗೋಪನೆ ಇಲಾಖೆ, ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ಇಲಾಖೆ ತಮಗೆ ನೀಡಿರುವ ಅನುದಾನ ಬೇಗನೆ ಮುಗಿಸಲು ಸೂಚಿಸಿದರು.

ಲೋಕೋಪಯೋಗಿ ಇಲಾಖೆ ಇನ್ನೂ ಯಾವುದೇ ಕಾಮಗಾರಿಗಳು ಅತಿ ತುರ್ತಾಗಿ ಕಾಮಗಾರಿಗಳನ್ನು ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿಯೊಂದು ಇಲಾಖೆ ಮಾಹಿತಿ ಪಡೆದು ಜಿಲ್ಲಾಧಿಕಾರಿ ಮಾತನಾಡಿ, ಕೆಲವೊಂದು ಇಲಾಖೆಗಳು ಕಡಿಮೆ ಪ್ರಮಾಣದಲ್ಲಿ ಪ್ರಗತಿ ಸಾಧಿಸಿದರೆ ಮುಂದಿನ ದಿನಗಳ 100 ಪ್ರತಿಶತ ಗುರಿಮುಟ್ಟಲು ಸೂಚಿಸಿದರು. ಯಾರು ಇಲ್ಲಿಯವರು ಅನುದಾನ ಬಳಕೆ ಮಾಡಿಕೊಂಡಿಲ್ಲ ಅವರು ಬೇಗನೆ ಅನುದಾನ ಬಳಕೆ ಮಾಡಿಕೊಳ್ಳಲು ಸೂಚಿಸಿದರು.

ಪ್ರಗತಿ ಹೊಂದಿರುವ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು. ಮುಂದಿನ ಡಿಸೆಂಬರ್ 22 ರಂದು ನಡೆಯುವ ಸಭೆಗೆ ತಾಲೂಕಮಟ್ಟದ ಅಧಿಕಾರಿಗಳನ್ನು ಕರೆತರಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಫೆಬ್ರುವರಿ 2023 ರ ಅಂತ್ಯದವರೆಗೆ ಎಲ್ಲಾ ಅನುದಾನ ಖರ್ಚು ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಸಫಾಯಿ ಕರ್ಮಚಾರಿಗಳ ಸಭೆ:- ಜಿಲ್ಲಾಧಿಕಾರಿ ಮಾತನಾಡಿ, ಪೌರಕಾರ್ಮಿಕರಿಗೆ ಕನಿಷ್ಠ ವೇತನ ಮತ್ತು ಇ.ಎಸ.ಐ ಮತ್ತು ಫಿ.ಎಫ್ ಮೊತ್ತವನ್ನು ಸರಿಯಾಗಿ ಕಡಿತಗೊಳಿಸಲಾಗುತ್ತಿದೆ ಎಲ್ಲ 5-6 ತಿಂಗಳಿನ ವೇತನವನ್ನು ಅಧಿಕಾರಿಗಳು ಪರಿಶೀಲನೆ ಮಾಡಬೇಕೆಂದರು. ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ ಗುಣ್ಣಮಟ್ಟದಾಗಿರಬೇಕು ಅದನ್ನು ಪರಿಶೀಲಿಸಿ ನೀಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೌರಕಾರ್ಮಿಕ ಆರೋಗ್ಯ ತಪಾಸಣೆ ಮಾಡಿಸಬೇಕು. ಅಧಿಕಾರಿಗಳು ಅವರಿಗೆ ಸಿಗುವಂತ ಸೌಲಭ್ಯಗಳನ್ನು ನೀಡಬೇಕೆಂದರು.
ಮಹಾನಗರ ಪಾಲಿಕೆ ಸ್ವಚ್ಪಗೊಳಿಸುವ ಯಂತ್ರಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆಯೆಂದು ಜಿಲ್ಲಾಧಿಕಾರಿ ಪ್ರಶ್ನೆ ಮಾಡಿದರು. ಕಾರ್ಯನಿರ್ವಾಹಕ ಅಭಿಯಂತರಾದ ಮಾತನಾಡಿ, ಮ್ಯಾನಹೋಲ್ ಸ್ವಚ್ಫಗೊಳಿಸಲು 06 ಜಟ್ಟಿಂಗ್ ಮಷೀನ್ ಮತ್ತು 01 ಸಕ್ಷನ ಕಮ್ ಜೆಟ್ಟಿಂಗ್ ಮಷೀನ್ ಇವೆ ಪ್ರತ್ಯೇಕ್ಷವಾಗಲಿ ಮತ್ತು ಪರೋಕ್ಷವಾಗಲಿ ಎಲ್ಲ ಯಂತ್ರಗಳ ಮೂಲಕ ಕಾರ್ಯನಿರ್ವಹಿಸುತ್ತಿವೆ ಎಂದರು.

ಹೊಸ ಯಂತ್ರಗಳು ಖರೀದಿಸಬೇಕಾದರೆ ಒಂದು ಮಷೀನಿಗೆ ರೂ. 5.00 ಲಕ್ಷದಿಂದ 10.00 ಲಕ್ಷ ರೂಪಾಯಿಗಳು ಬೇಕಾಗುತ್ತತೆಯೆಂದು ತಿಳಿಸಿದರು. ಜಿಲ್ಲಾಧಿಕಾರಿ ಮಾತನಾಡಿ ಖಾಸಗಿ ಮಷೀನಗಳು ಎಮ್.ಓ.ಈ. ಪ್ರಕಾರ ತೆಗೆದುಕೊಂಡು ಕೆಲಸ ನಿರ್ವಹಿಸಲು ಸೂಚಿಸಿದರು.
ಪೌರಕಾರ್ಮಿಕರಿಗೆ ನಿವೇಶನ ಕೊಡಬೇಕು ಸ್ಥಳಗುರುತಿಸಬೇಕು ಕೌಶಲ್ಯ ತರಬೇತಿ ನೀಡಬೇಕು ಎಂದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತರಾದ ಮಾಧವ ಗಿತ್ತೆ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಪಿ ಶುಭ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗದೇವಪ್ಪ ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮನೋಹರ ದೌಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ಧಿ ಉಪನಿರ್ದೇಶಕ ನವೀನ ಯು. ಮಹಾನಗರ ಪಾಲಿಕೆ ಅಧಿಕಾರಿಗಳು ಸೇರಿದಂತೆ ಜಿಲ್ಲಾಮಟ್ಟ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here