ಕಲಬುರಗಿ; ನಗರದ ಖಾಸಗಿ ಸಭಾಂಗಣದಲ್ಲಿ 2023-24 ನೇ ಸಾಲಿನ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ 1994 ಕಲಬುರಗಿ ವಿಭಾಗೀಯ, ಜಿಲ್ಲಾ ಸಲಹಾ ಸಮಿತಿ ಮತ್ತು ಜಿಲ್ಲಾ ಪರಿವಿಕ್ಷಣಾ ಮತ್ತು ಮೇಲ್ವಿಚಾರಣಾ ಸಮಿತಿ ಅಧಿಕಾರಿಗಳಿಗೆ ಅರಿವು ಮೂಡಿಸುವ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಗಾರವನ್ನು ಆ.ಕು.ಕ ವಿಭಾಗೀಯ ಸಹ ನಿರ್ದೇಶಕ ಡಾ.ಶಂಕ್ರೆಪ್ಪ ಮೈಲಾರೆ ಅವರು ಉದ್ಘಟಿಸಿ ಮಾತನಾಡುತ್ತಾ ರಾಜ್ಯದಲ್ಲಿ ಲಿಂಗಾನುಪಾತ ಕಾಪಾಡುವಲ್ಲಿ ನಮ್ಮ ಇಲಾಖೆಯು ಮಹತ್ವದ ಪಾತ್ರ ವಹಿಸುತ್ತದೆ, ಅದೆ ರೀತಿಯಾಗಿ ಈ ಕಾಯ್ದೆಯು ಗರ್ಭದಾರಣೆ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರವಿಧಾನಗಳು (ಪಿ.ಸಿ ಮತ್ತು ಪಿ.ಎನ್.ಡಿ.ಟಿ) 1994 ರಲ್ಲಿ ಜಾರಿಗೆ ಬಂತು ನಂತರದಲ್ಲಿ ಇದನ್ನು 2003 ರಲ್ಲಿ ತಿದ್ದುಪಡಿ ಮಾಡಲಾಯಿತು, ಮತ್ತು ಹೆಣ್ಣು ಭ್ರೂಣ ಹತ್ಯೆಯ ಬಗ್ಗೆ ಎಲ್ಲರು ಎಚ್ಚೆತ್ತುಕೊಳ್ಳಬೆಕು ಎಂದು ಎಲ್ಲಾ ತಾಲೂಕಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ರಾಜಶೇಖರ ಮಾಲಿ ರವರು ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆಯ ಬಗ್ಗೆ ಎಚ್ಚೆತ್ತುಕೊಂಡು ಎಲ್ಲಾ ತಾಲೂಕಾ ಆರೋಗ್ಯ ಅಧಿಕಾರಿಗಳು ಕ್ರಮ ವಹಿಸಿ ,ವರದಿ ಸಲ್ಲಿಸಬೇಕೆಂದು ತಿಳಿಸಿದರು.
ಈ ಸಮಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರಾಜಶೆಖರ ಮಾಲಿ, ಕೆಪಿಎಂಇ ವೈದ್ಯಕೀಯ 2 ಬೆಂಗಳೂರು ಉಪ ನಿರ್ದೇಶಕ ಡಾ.ವಿವೇಕ ದೋರೈ, ಆ.ಕು.ಕ ವಿಭಾಗೀಯ ಉಪ ಸಹ ನಿರ್ದೇಶಕ ಡಾ.ಶರಣಬಸಪ್ಪ ಗಣಜಲಖೇಡ, ಜಿಲ್ಲಾ ಶಸ್ತ್ರಜ್ಞರು ಮತ್ತು ಜಿಲ್ಲಾ ಆಸ್ಪತ್ರೆ ಅಧಿಕ್ಷಕ ಡಾ.ಅಂಬಾರಾಯ ರುದ್ರವಾಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶರಣಪ್ಪ ಎಂ.ಡಿ. ಸೇರಿದಂತೆ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಕಲಬುರಗಿ ಮತ್ತು ಬೀದರ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ,ಕಲಬುರಗಿ ,ವಿಜಯನಗರ ಜಿಲ್ಲೆಗಳ ಜಿಲ್ಲಾ ಆರೋಗ್ಯ ಅಧಿಕಾರಿಗಳು ,ತಾಲೂಕಾ ಆರೋಗ್ಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.