ಕಲಬುರಗಿ EPF ಕಚೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವ

0
25

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಕ್ಷೇತ್ರೀಯ ಕಾರ್ಯಾಲಯದಲ್ಲಿ 68ನೇ ಕರ್ನಾಟಕ ರಾಜ್ಯೋತ್ಸವವನ್ನು ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜ್ಯೋತಿ ‌ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಕೇಂದ್ರ ಸರ್ಕಾರದ ಕಛೇರಿಗಳಲ್ಲಿ ಬಹಳ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿರುವುದು ಸಂತೋಷದಾಯಕವಾಗಿದೆ.

Contact Your\'s Advertisement; 9902492681

ಕೇಂದ್ರ ಸರ್ಕಾರ ಕನ್ನಡವನ್ನು ಶಾಸ್ತ್ರೀಯ ಭಾಷೆ ಎಂದು ಘೋಷಿಸಿದೆ. ಕನ್ನಡ ಸಾಹಿತಿಗಳಿಗೆ ಎಂಟು ಜ್ಞಾನಪೀಠ ಪ್ರಶಸ್ತಿ ಲಭಿಸಿವೆ. ಕನ್ನಡ ಸಾಹಿತ್ಯಕ್ಕೆ ವಚನಕಾರರ ಕೊಡುಗೆ ಅಪಾರವಾಗಿದೆ. ವಚನ ಸಾಹಿತ್ಯವು ಅಂದಿನ ಸಾಮಾಜಿಕ ಕ್ರಾಂತಿಯ ಪ್ರಕ್ರಿಯೆಗೆ ಕನ್ನಡಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಅನ್ಯ ಭಾಷಿಕರಿಂದ ಭಾಷಣ ಹಾಗೂ ಸಿಬ್ಬಂದಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಈ ವೇಳೆ ಭವಿಷ್ಯ ನಿಧಿ ಕ್ಷೇತ್ರೀಯ ಆಯುಕ್ತ ರವಿ ಯಾದವ, ಸಹಾಯಕ ನಿರ್ದೇಶಕ ದಿನೇಶ ಪಡತೆ, ಮನೋರಂಜನಾ ಸಂಘದ ಕಾರ್ಯದರ್ಶಿ ಬಸವರಾಜ ಹೆಳವರ ಯಾಳಗಿ, ವಿಠ್ಠಲ, ಮೋಹ್ಮದ ಅರ್ಸ್ಲಾನ್ ಕಿತ್ತೂರ, ಮದನ ಕುಲಕರ್ಣಿ, ಪ್ರತಿಭಾ, ಸವಿತಾ, ಶಿವಶರಣಪ್ಪ ಶಿವಕೇರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಪ್ರಶಾಂತ ಇಂಗಳೇಶ್ವರ ನಿರೂಪಿಸಿದರು. ಕೇಶವರಾವ ಕುಲಕರ್ಣಿ ಸ್ವಾಗತಿಸಿದರು. ಕಲ್ಪನಾ ಮತ್ತು ಮನಿಶಾ ಪ್ರಾರ್ಥಿಸಿದರು. ಅರುಣಕುಮಾರ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here