ಕಲಬುರಗಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಬಿ.ಶರತ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಶರತ್ ಅವರನ್ನು ಸರ್ಕಾರವು ಇತ್ತೀಚೆಗೆ ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ವರ್ಗಾಯಿಸಿತ್ತು. ಅದರಂತೆ ಇಂದು ಜಿಲ್ಲೆಯ ಜಿಲ್ಲಾಧಿಕಾರಿಗಳ ಹುದ್ದೆಯ ಕಾರ್ಯಭಾರವನ್ನು ವಹಿಸಿಕೊಂಡರು.
2011ರ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಬಿ.ಶರತ್ ಅವರು ಮೂಲತ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯವರಾಗಿದ್ದು, ಈ ಹಿಂದೆ ಬೀದರ ಮತ್ತು ಮಂಡ್ಯ ಜಿಲ್ಲಾ ಪಂಚಾಯತ್ ಸಿ.ಇ.ಓ. ಆಗಿ ಸೇವೆ ಸಲ್ಲಿಸಿದ್ದಾರೆ.
ನಿರ್ಗಮಿತ ಜಿಲ್ಲಾಧಿಕಾರಿ ಅರ್.ವೆಂಕಟೇಶ ಕುಮಾರ ಅವರು 2017ರ ಜುಲೈ 31 ರಂದು ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಆಧಿಕಾರ ವಹಿಸಿಕೊಂಡಿದ್ದು, ಇಂದಿಗೆ ಎರಡು ವರ್ಷ ಸೇವೆಯನ್ನು ಪುರೈಸಿದ್ದಂತಾಗಿದೆ.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶರಣಪ್ಪ, ಸಹಾಯಕ ಆಯುಕ್ತರಾದ ರಾಹುಲ ಪಾಂಡ್ವೆ, ರಮೇಶ ಕೋಲಾರ, ಐ.ಎ.ಎಸ್.ಪ್ರೊಬೇಷನರ್ ಅಧಿಕಾರಿ ಡಾ.ಗೋಪಾಲಕೃಷ್ಣ, ಶಿಷ್ಠಚಾರ ತಹಶೀಲ್ದಾರ ಪ್ರಕಾಶ್ ಚಿಂಚೋಳಿಕರ ಇದ್ದರು.