ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರದ ಕುರಿತು ನಡೆಸಲಿದ್ದೇನೆ: ಡಿಸಿಎಂ ಗೋವಿಂದ ಕಾರಜೋಳ

0
108

ಹುಬ್ಬಳ್ಳಿ: ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ನಿರಾಶ್ರಿತರ ಪರಿಹಾರದ ಬಗ್ಗೆ ಪರಿಶೀಲನೆ ನಡೆಸಲಿದ್ದೇನೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

ಹುಬ್ಬಳ್ಳಿ ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಾಗಲಕೋಟಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದೇನೆ, ನಿರಾಶ್ರಿರತರ ರಕ್ಷಣೆ ಹಾಳಾದ ರಸ್ತೆ, ಸೇತುವೆ ನಿರ್ಮಾಣ ಮೊದಲ ಆದ್ಯತೆ ನೀಡಲಾಗುತ್ತದೆ ಎಂದರು. ಎರಡು ದಿನ ಬಾಗಲಕೋಟಿಯಲ್ಲಿದ್ದು ನಂತರ ಮೈಸೂರು, ಮಂಗಳೂರು, ಕೊಡಗು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದೇನೆ ಎಂದು ಅವರು ಹೇಳಿದರು.

Contact Your\'s Advertisement; 9902492681

ಸಂಪರ್ಕ ರಸ್ತೆಗಳ ದುರಸ್ತಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಅದಕ್ಕಾಗಿ 500 ಕೋಟಿ ಮೀಸಲಿಡಲಾಗುತ್ತಿದೆ. ಸೆ. 7 ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಿ ನೆರೆ ಪೀಡಿತ ಪ್ರದೇಶಗಳ ಮಾಹಿತಿ ಪಡೆಯಲಿದ್ದಾರೆ ಎಂದರು. ಈಗಾಗಲೇ ಕೇಂದ್ರ ಅಧ್ಯಯನ ತಂಡ ಬಂದು ಹೋಗಿದೆ ಶೀಘ್ರವೇ ಪರಿಹಾರ ಧನ ಬಿಡುಗಡೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಚಿವ ಡಿ ಕೆ ಶಿವಕುಮಾರ ಇಡಿ ವಿಚಾರಣೆಯ ಕುರಿತು ಮಾತನಾಡಿದ ಅವರು, ಈ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ಅವರ ವಿಚಾರಣೆ ನಡೆದಿದ್ದು, ಈಗಲೇ ಏನೂ ಹೇಳುವುದಿಲ್ಲ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here