ಕಲಬುರಗಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಭೆ ರವರು ನಗರದ ವಿದ್ಯಾ ನಗರ ಬಡಾವಣೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ದತ್ತು ಕೇಂದ್ರ, ಮಕ್ಕಳ ಪಾಲನಾ ಸಂಸ್ಥೆ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯಾನಗರ ಬಡಾವಣೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ದತ್ತು ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ನಂತರ ನಗರದ ಮಕ್ಕಳ ಪಾಲನಾ ಸಂಸ್ಥೆ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ಚಿಕಿತ್ಸೆ ಪಡೆಯುತ್ತಿರುವ ಶಿಶುಗಳ ಪೋಷಕರೊಂದಿಗೆ ಚಿಕಿತ್ಸೆ ಬಗ್ಗೆ ವಿಚಾರಿಸಿದರು.
ಈ ವೇಳೆ ವಸತಿ ಶಾಲೆ ಮತ್ತು ಆರೋಗ್ಯ ಇಲಾಖೆಯ ವೈದ್ಯರು ಜೊತೆಗೆ ಇದ್ದರು. ನಾಳೆ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾ ವಿಭಾಗ ಮಟ್ಟದ ವಿಚಾರಣೆಯಲ್ಲಿ ಭಾಗಿಯಾಗುವರು. ಮಧ್ಯಾಹ್ನ 2.30 ಗಂಟೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ದತ್ತು ಕೇಂದ್ರ ಮಕ್ಕಳ ಪಾಲನಾ ಸಂಸ್ಥೆ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದಾರೆ.
ಡಿಸೆಂಬರ್ 19 ರಂದು ಬೆಳಿಗ್ಗೆ 10.30 ಗಂಟಿಗೆ ಕಲಬುರ್ಗಿ ವಿಭಾಗ ಮಟ್ಟದ ವಿಚಾರಣೆ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಬಳ್ಳಾರಿಗೆ ಪ್ರಯಾಣಿಸುವರು.