ಶಹಾಬಾದ: ಬಾಲ ಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗು, ಮಕ್ಕಳ ಹಕ್ಕುಗಳನ್ನು ಕಾಪಾಡಲು ಎಲ್ಲರೂ ಸಾಂಘಿಕವಾಗಿ ಈ ಅನಿಷ್ಠ ಪದ್ಧತಿ ವಿರುದ್ಧ ಹೋರಾಡುವುದರ ಮೂಲಕ ಬಾಲ ಕಾರ್ಮಿಕ ಮುಕ್ತ ತಾಲೂಕಿಗೆ ಶ್ರಮಿಸಬೇಕೆಂದು ಕಾರ್ಮಿಕ ಇಲಾಖೆಯ ಡಿಇಒ ಬಸವರಾಜ ಕಲಶೆಟ್ಟಿ ಹೇಳಿದರು.
ಅವರು ನಗರದಲ್ಲಿ ಬಾಲ ಕಾರ್ಮಿಕ ಅನಿಷ್ಠ ಪದ್ಧತಿಯ ವಿರುದ್ಧ ಆಯೋಜಿಸಲಾದ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ನಿμÉೀಧ ಮತ್ತು ನಿಯಂತ್ರಣ ಕಾಯ್ದೆ, 1986 ಅನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ಸಂಜ್ಞೆಯ ವಾರೆಂಟ್ ರಹಿತ ಬಂಧಿಸಬಹುದಾದ ಅಪರಾಧವಾಗಿದೆ ಎಂದರು.
ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಗ್ಯಾರೇಜ್, ಡಾಬಾ, ಹೋಟೆಲ್, ಕಾರ್ಖಾನೆ ಮತ್ತು ಗಣಿ, ಇಟ್ಟಿಗೆ ಭಟ್ಟಿ ಮತ್ತು ಕಟ್ಟಡ ನಿರ್ಮಾಣ ನಡೆಯುತ್ತಿರುವ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಲಾಗುವುದು, ಕೆಲಸದಲ್ಲಿ ತೊಡಗಿರುವ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿ ಕಲ್ಪಿಸಿ ಅವರಿಗೆ ಶಿಕ್ಷಣದಲ್ಲಿ ಮುಂದುವರಿಕೆಗೆ ಅವಕಾಶ ಮಾಡಿಕೊಡುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ಹೇಳಿದರು.
ನಗರದ ಎಲ್ಲಾ ಕಿರಾಣಿ ಅಂಗಡಿಗಳ, ಗ್ಯಾರೇಜ್, ಬೇಕರಿ, ಹೋಟೆಲ್ ಮಾಲೀಕರಿಗೆ ಮತ್ತು ದುಡಿಯುವ ಕಾರ್ಮಿಕರಿಗೆ ಕರಪತ್ರಗಳನ್ನು ಹಂಚಲಾಯಿತು.
ಈ ಸಂಧರ್ಭದಲ್ಲಿ ಮಕ್ಕಳ ಸಹಾಯವಾಣಿಯ ಮರಳಮ್ಮ, ಚೈಲ್ಡ್ ಲೈನ್ ನ ಜಯಶಂಕರ, ಪೆÇೀಲಿಸ್ ಇಲಾಖೆಯ ಕಿರಣಕುಮಾರ ಚಾರಿ, ಸಂದೀಪ ಹದನೂರ, ಶ್ರೀನಿವಾಸ ಇದ್ದರು.