ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ ಅನುಷ್ಠಾನಕ್ಕಾಗಿ ಅನುದಾನ ಬಿಡುಗಡೆಗೆ ಆಗ್ರಹ

0
179

ಕಲಬುರಗಿ: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ವಿವಿಧ ವಿದ್ಯಾರ್ಥಿವೇತನಗಳ ಸಮರ್ಪಕ ಅನುಷ್ಠಾನಕ್ಕಾಗಿ ಅಗತ್ಯ ಮತ್ತು ತುರ್ತು ಅನುದಾನ ಬಿಡುಗಡೆಗೊಳಿಸುವಂತೆ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸ್ಟೊಡೆಂಟ್ ಇಸ್ಲಾಮಿಕ್ ಆರ್ಗನೈಜೆಷನ್ ಆಪ್ ಇಂಡಿಯಾ (ಎಸ್.ಐ.ಓ) ವತಿಯಿಂದ ಪ್ರತಿಭಟನೆ ನಡೆಸಿ ಮುಖ್ಯಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯ ಅಧ್ಯಕ್ಷ ಜಿಶಾನ್ ಆಖಿಲ್ ಮಾತನಾಡಿ, ರಾಜ್ಯದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಜಾರಿಗೊಳ್ಳುತ್ತಿರುವ ವಿವಿಧ ರೀತಿಯ ವಿದ್ಯಾರ್ಥಿವೇತನ/ಶಿಷ್ಯವೇತನ/ಪ್ರೋತ್ಸಾಹ ಧನ/ಉತ್ತೇಜನದಂತಹ ಕಾರ್ಯಕ್ರಮ/ ಯೋಜನೆಗಳಿಗೆ ಸೂಕ್ತ ಅನುದಾನ ಸಿಗದೆ ಸಮರ್ಪಕ ಜಾರಿಯಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

Contact Your\'s Advertisement; 9902492681

2023-24 ರ ಜುಲೈ ತಿಂಗಳಲ್ಲಿ ಮಂಡಿಸಿದ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿಗಾಗಿ ಸುಮಾರು 2100 ಕೋಟಿ ರೂಪಾಯಿ ಅನುದಾನವನ್ನು ಒದಗಿಸಲಾಗಿತ್ತು, ಇದರಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯಕ್ಕೆ ಅಂದಾಜು 1700 ಕೋಟಿ ರೂಪಾಯಿ ಹಂಚಿಕೆ ಮಾಡಿತ್ತು, ಈ ಅನುದಾನದಲ್ಲಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ, ಮೆರಿಟ್ ಕಮ್ ಮೀನ್ಸ್ (101/1), ನ್ಯಾಷನಲ್ ಓವರ್ಸೀಸ್ ಸ್ಕಾಲರ್ಶಿಪ್(!1೦5) ಹಾಗೂ ಎಂ.ಫಿಲ್ ಮತ್ತು ಪಿ.ಎಚ್.ಡಿ ಫೆಲೋಶಿಪ್ ಅನ್ನು ನೀಡಲು 160 ಕೋಟಿ ರೂಪಾಯಿ ನಿಯೋಜಿಸಲಾಗಿದೆ, ಆದರೆ ಕಳೆದ 6 ತಿಂಗಳ ಅವಧಿಯಲ್ಲಿ ನಿರ್ದೇಶನಾಲಯಕ್ಕೆ ಬಿಡುಗಡೆಗೊಂಡಿದ್ದು ಕೇವಲ 73.32 ಕೋಟಿ ಇದರಲ್ಲಿ ವೆಚ್ಚವಾದದ್ದು/ಬರ್ಚಾದದ್ದು 7.21 ಕೋಟಿ ಮಾತ್ರ ಇದು ಒಟ್ಟು ಮೀಸಲಿದ್ದ ಅನುದಾನದ ಪೈಕಿ 1% ನಷ್ಟು ಮಾತ್ರ ಅನುದಾನ ಬಳಕೆಯಾಗಿದೆ ಎಂದರು.

ಕಳೆದ ವರ್ಷ ಕೇಂದ್ರ ಸರ್ಕಾರವು ಎನ್.ಎಸ್.ಪಿ((5೧) ಅಡಿಯಲ್ಲಿ ಒಂದರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ನಿಲ್ಲಿಸಿ ಆದೇಶ ಹೊರಡಿಸಿತು ಇದಕ್ಕಾಗಿ ಆರ್.ಟಿ.ಇ ಕಾಯ್ದೆಯನ್ನು ತಪ್ಪಾಗಿ ವ್ಯಾಖ್ಯಾನಿಸಿತ್ತು, ಅರ್ಜಿ ಸಲ್ಲಿಸಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡಲು ಸುಮಾರು 110 ಕೋಟಿ ರೂ.ಗಳ ಅಗತ್ಯತೆಯಿತ್ತು.

ಈ ಬಾರಿಯ ಜುಲೈ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 60 ಕೋಟಿ ರೂಪಾಯಿ ನೀಡಿ 55೧ ಅಡಿಯಲ್ಲಿ ನೀಡಲು ಸಂಪೂರ್ಣ ರಾಜ್ಯ ಪ್ರಾಯೋಜಿತ ಕಾರ್ಯಕ್ರಮವನ್ನಾಗಿ ಮುಂದುವರಿಸುವುದಾಗಿ ಘೋಷಿಸಿದರು, ಆದರೆ ಕಳೆದ ವರ್ಷ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೂ ಸ್ಕಾಲರ್ಶಿಪ್ ತಲುಪಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.

ಇನ್ನೊಂದೆಡೆ ರಾಜ್ಯದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸಂಶೋಧನಾ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ನೀಡಲಾಗುತ್ತಿದ್ದ ಮಾಸಿಕ 25,000 ಮೊತ್ತವನ್ನು 2022-23 ನೇ ಸಾಲಿನ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ ಕಡಿತಗೊಳಿಸಿ 10,000 ಕ್ಕೆ ಇಳಿಸಿ, 2020-21ನೇ ಸಾಲಿನ ವಿದ್ಯಾರ್ಥಿಗಳಿಗೆ ಮೂರು ವರ್ಷಬಿದ್ದ ಪಿ.ಎಚ್.ಡಿ ಫೆಲೋಶಿಪ್ ಅವಧಿಯನ್ನು ಎರಡು ವರ್ಷಕ್ಕೆ ಕಡಿತಗೊಳಿಸುವ ಮೂಲಕ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಕೊಡಲಿ ಪೆಟ್ಟು ನೀಡಿದೆ. ಇದರಿಂದ ಬಹುತೇಕ ವಿದ್ಯಾರ್ಥಿಗಳು ಸಂಶೋಧನೆಯನ್ನು ಅರ್ಧಕ್ಕೆ ನಿಲ್ಲಿಸುವ ದುಸ್ಥಿತಿ ಎದುರಾಗಿದೆ, ಆದ್ದರಿಂದ ಸರ್ಕಾರ 2016-17ರ ಫೆಲೋಶಿಪ್ ಅಧಿಸೂಚನೆಯನ್ನೇ ಯಥಾವತ್ತಾಗಿ ಜಾರಿಗೊಳಸಬೇಕೆಂಬುದು ವಿದ್ಯಾರ್ಥಿಗಳು ಆಗ್ರಹಿಸಿದರು.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಚಾಲ್ತಿಯಲ್ಲಿರುವ ವಿವಿಧ ವಿದ್ಯಾರ್ಥಿ ವೇತನದ ಕಾರ್ಯಕ್ರಮಗಳಿಗೆ ಅಗತ್ಯ ಮತ್ತು ತುರ್ತು ಅನುದಾನ ಬಿಡುಗಡೆ ಮಾಡಿ, ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗಬೇಕೆಂದು ಮನವಿ ಮಾಡಿದ್ದರು.

ನಗರ ಘಟಕ ಅಧ್ಯಕ್ಷ ಸೈಯ್ಯದ್ ಮಾಜ್, ಸುಫಿಯಾನ್ ಜೈನ್, ಸಿರಾಜ್ ಶಹನಾ, ಶೋಯೆಬ್, ಮುಬೀನ್ ಅಹ್ಮದ್ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here