ಡಿಸೆಂಬರ್ 26 ರಂದು 100 ವಿದ್ಯುತ್‍ಚಾಲಿತ ಬಸ್‍ಗಳ ಲೋಕಾರ್ಪಣೆ

0
18

ಬೆಂಗಳೂರು; ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ಒ/s. ಖಿಒಐ ಸ್ಮಾರ್ಟ್ ಮೊಬಿಲಿಟಿ ಸಿಟಿ ಲಿಮಿಟೆಡ್‍ನ 100 ವಿದ್ಯುತ್ ಚಾಲಿತ ಬಸ್‍ಗಳ ಲೋಕಾರ್ಪಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 26 ರಂದು ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಚಾಲನೆ ನೀಡಲಿದ್ದಾರೆ.

ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಘನ ಉಪಸ್ಥಿತಿ ಇರಲಿದ್ದು, ಶಾಸಕರಾದ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವರು, ವಿಧಾನ ಪರಿಷತ್ ಸದಸ್ಯರು, ಶಾಸಕರು ಹಾಗೂ ಇತರೆ ಗಣ್ಯರು, ಸಂಸ್ಥೆಯ ಅಧಿಕಾರಿಗಳು/ನೌಕರರು ಉಪಸ್ಥಿತರಿರಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here