ಕೃಷಿ ಭಾಗ್ಯ ಯೋಜನೆ ಅರ್ಜಿ ಸಲ್ಲಿಸಲು ಜನೆವರಿ 01 ಕೊನೆ ದಿನ

0
23

ಸುರಪುರ: ಕೃಷಿ ಭಾಗ್ಯ ಯೋಜನೆ: 2023-24ರ ಆಯವ್ಯಯ ಭಾಷಣದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಕಂಡಿಕೆ- 39 ರಲ್ಲಿ “ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿತ್ತು. ಈ ಯೋಜನೆಯನ್ನು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸಲಾಗುವುದು” ಎಂದು ಘೋಷಿಸಿರುತ್ತಾರೆ.

ಯೋಜನೆಯ ಗುರಿ: ಮಳೆಯಾಶ್ರಿತ ಕೃಷಿ ನೀತಿ, 2014 ರನ್ವಯ ರಾಜ್ಯದ 5 ಒಣ ಹವಾಮಾನ ವಲಯಗಳ 24 ಬರ ಪೀಡಿತ ಜಿಲ್ಲೆಗಳಲ್ಲಿನ 106 ತಾಲ್ಲೂಕುಗಳಲ್ಲಿ ಹಾಗೂ ಗಣಿಗಾರಿಕೆಯಿಂದ ಬಾದಿತ ಪ್ರದೇಶದಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವುದರೊಂದಿಗೆ ಬರ ಉಪಶಮನದ ಗುರಿಯನ್ನು ಹೊಂದಿರುತ್ತದೆ.

Contact Your\'s Advertisement; 9902492681

ಈ ಯೋಜನೆಯಡಿ ಆಸಕ್ತ ರೈತರು ಅರ್ಜಿ ಸಲ್ಲಿಸಲ ಜನೆವರಿ 01 ಕೊನೆ ದಿನ ವಾಗಿರುತ್ತದೆ. ಆದ್ದರಿಂದ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಸಲ್ಲಿಸುವುದು.

ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಾಲೂಕ ಸಹಾಯಕ ಕೃಷಿ ನಿರ್ದೇಶಕರು ಸುರಪುರ ರವರಾದ ಡಾ. ಭೀಮರಾಯ ಹವಾಲ್ದಾರ್ ರವರು ರೈತರಲ್ಲಿ ವಿನಂತಿಸಿ,ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸುರಪುರ ಅಥವಾ ಕೃಷಿ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರ ರವರನ್ನು ಸಂಪರ್ಕಿಸಲು ಕೋರಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here