ಪಾಲಕರಿಗೆ ಒಳ್ಳೆಯ ಮಕ್ಕಳಾಗಿ, ನಾಯಕತ್ವದ ಗುಣ ಬೆಳೆಸಿಕೊಳ್ಳಿ: ಸೋಮನಾಥ ನಿಗ್ಗುಡಗಿ

0
54

ಕಲಬುರಗಿ: ವಿದ್ಯಾರ್ಥಿ ಜೀವನ ಬಹಳ ಪ್ರಮುಖವಾಗಿರುವುದು, ಈ ವಯಸ್ಸಿನಲ್ಲಿ ನಿಮ್ಮನ್ನು ನೀವು ಗುರುತಿಸಿಕೊಂಡು ಪಾಲಕರಿಗೆ ಒಳ್ಳೆಯ ಮಕ್ಕಳಾಗಿ ನಾಯಕತ್ವ ಗುಣ ಬೆಳೆಸಿಕೊಳ್ಳಿ ಎಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಂಸ್ಥೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ಸಂಚಾಲಕ ಸೋಮನಾಥ ನಿಗ್ಗುಡಗಿ ಅವರು ನುಡಿದರು.

ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪ್ರತಿಷ್ಠಿತ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ 2023 – 24ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

Contact Your\'s Advertisement; 9902492681

ಮುಂದುವರೆದು ವಿದ್ಯಾರ್ಥಿಗಳು ತಮ್ಮ ಜೀವನದ ಗುರಿ ನಿಶ್ಚಿತ ಪಡಿಸಿಕೊಂಡು ಪರಿಶ್ರಮ ಪಟ್ಟರೆ ಯಶಸ್ಸು ನಿಶ್ಚಿತ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಜಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ಉಚ್ಛನ್ಯಾಯಲಯದ ನ್ಯಾಯವಾದಿಗಳಾದ ಶ್ರೀಮತಿ ಅನುರಾಧ ದೇಸಾಯಿ ಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ನಿಮ್ಮ ಮೇಲೆ ನಿಮಗೆ ನಂಬಿಕೆ ಇರಲಿ ಅಂದಾಗ ಮಾತ್ರ ಯಶಸ್ಸು ಸಾಧ್ಯ ಎಂದು ಹೇಳಿದರು.

ಕಾರ್ಯ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಎನ್. ಗಿರಿಜಾ ಶಂಕರ್ ರವರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ಸಂಸ್ಕಾರವು ಸಹ ಕಲಿಯುವುದು ಮುಖ್ಯ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರು ವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಇದೆ ಸಂದರ್ಭದಲ್ಲಿ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವ್ಯಾಪಿಸುತಿರುವುದರಿಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ವತಿಯಿಂದ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಿಸುವುದರ ಮೂಲಕ ಮುಂಜಾಗೃತೆ ವಹಿಸಿ ಜಾಗೃತಿ ಮೂಡಿಸಲು ಸೂಚಿಸಲಾಯಿತು.

ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ. ನಾಗೇಂದ್ರ ಮಸೂತಿ, ಡಾ. ವೀಣಾ ಎಚ. ಶ್ರೀಮತಿ ಉಮಾ ರೇವೂರ್ ಮತ್ತು ಶ್ರೀಮತಿ ಮಂಗಲಾ ಬಿರಾದಾರ ಅವರು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಶ್ರೀಮತಿ ನಮ್ರತಾ ಹವಾ ಅವರು ನಿರೂಪಿಸಿದರು.

ಡಾ. ಮೋಹನರಾಜ ಪತ್ತಾರ ಅವರು ವಂದಿಸಿದರು. ಡಾ. ಚಂದ್ರಕಲಾ ಪಾಟೀಲ್ ರವರು ಸ್ವಾಗತ ಕೋರಿದರು. ಡಾ. ಮಹೇಶ ಗಂವ್ಹಾರ ಅವರು ಅತಿಥಿಗಳನ್ನು ಪರಿಚಯಿಸಿದರು. ಶ್ರೀಮತಿ ಉಮಾ ರೇವೂರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ನಾಗರತ್ನ ಅವರು 2023-24 ನೆ ಸಾಲಿನ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳನ್ನು ಪರಿಚಯಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here