ವಿದ್ಯೆಯಂದಿಗೆ ಸಂಸ್ಕಾರ ಬೆಳೆಸಿಕೊಳ್ಳುವದು ಮುಖ್ಯ: ಎನ್. ಗಿರಿಜಾಶಂಕರ

0
29

ಕಲಬುರಗಿ: ವಿದ್ಯಾರ್ಥಿ ಜೀವನ ಬಹಳ ಪ್ರಮುಖವಾಗಿರುವುದು ಈ ವಯಸ್ಸಿನಲ್ಲಿ ವಿದ್ಯೆಯೊಂದಿಗೆ ಸಂಸ್ಕಾರ ಬೆಳೆಸಿಕೊಂಡಾಗ ಯಶಸ್ಸು ಸಾಧ್ಯ ಎಂದು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಎನ್. ಗಿರಿಜಾಶಂಕರ್ ಅವರು ನುಡಿದರು.

ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪ್ರತಿಷ್ಠಿತ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ 2023 – 24ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯಲ್ಲಿ ಮುಖ್ಯ ಅತಿಥಿಗಾಳಾಗಿ ಮತನಾಡಿದರು.

Contact Your\'s Advertisement; 9902492681

ಮುಂದುವರೆದು ವಿದ್ಯಾರ್ಥಿಗಳು ತಮ್ಮ ಜೀವನದ ಗುರಿ ತಲುಪಲು ಸಂಸ್ಕಾರವು ಅವಶ್ಯವಾಗಿ ಬೆಳೆಸಿಕೊಸಿಕೊಂಡು ಪರಿಶ್ರಮ ಪಟ್ಟರೆ ಯಶಸ್ಸು ನಿಶ್ಚಿತ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಸೋಮನಾಥ ನಿಗ್ಗುಡಗಿ ಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಪಾಲಕರಿಗೆ ಒಳ್ಳೆಯ ಮಕ್ಕಳಾಗಿ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕೆಂದು ಹೇಳಿದ್ದರು.

ಕಾರ್ಯ್ರಮದ ಇನ್ನೋರ್ವ ಮುಖ್ಯ ಅತಿಥಿಗಳಾದ ಉಚ್ಚನ್ಯಾಯಾಲದ ಈ ಹಿರಿಯ ವಕೀಲರಾದ ಶ್ರೀಮತಿ ಅನುರಾಧ ದೇಸಾಯಿ ಅವರು ಮಾತನಾಡುತ್ತಾ ವಿದ್ಯಾರ್ಥಿ ಜೀವನ ಬಹಳ ಪ್ರಮುಖವಾಗಿರುವದು ಈ ವಯಸ್ಸಿನಲ್ಲಿ ನಿಮ್ಮನ್ನು ನೀವು ಗೌರವಿಸಿಕೊಂಡಾಗ ಯಶಸ್ಸು ಸಾಧ್ಯ ನುಡಿದರು.

ಕಾರ್ಯ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವ್ಯಾಪಿಸುತಿರುವುದರಿಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ವತಿಯಿಂದ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಿಸುವುದರ ಮೂಲಕ ಮುಂಜಾಗೃತೆ ವಹಿಸಿ ಜಾಗೃತಿ ಮೂಡಿಸಲು ಸೂಚಿಸಲಾಯಿತು.

ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ. ನಾಗೇಂದ್ರ ಮಸೂತಿ, ಡಾ. ವೀಣಾ ಎಚ. ಶ್ರೀಮತಿ ಉಮಾ ರೇವೂರ್ ಮತ್ತು ಶ್ರೀಮತಿ ಮಂಗಲಾ ಬಿರಾದಾರ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀಮತಿ ನಮ್ರತಾ ಹವಾ ಅವರು ನಿರೂಪಿಸಿದರು. ಡಾ. ಮೋಹನರಾಜ ಪತ್ತಾರ ಅವರು ವಂದಿಸಿದರು. ಡಾ. ಚಂದ್ರಕಲಾ ಪಾಟೀಲ್ ರವರು ಸ್ವಾಗತ ಕೋರಿದರು. ಡಾ. ಮಹೇಶ ಗಂವ್ಹಾರ ಅವರು ಅತಿಥಿಗಳನ್ನು ಪರಿಚಯಿಸಿದರು. ಶ್ರೀಮತಿ ಉಮಾ ರೇವೂರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ನಾಗರತ್ನ ಅವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಹೆಸರು ಓದಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here