ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ; ವಿಧಾನ ಮತ್ತು ಮಾನತಂಡಗಳು

0
55

ಕಲಬುರಗಿ; ಸರ್ಕಾರದ ಮಹತ್ತರ ಯೋಜನೆಯಾದ ಯುವನಿಧಿ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, 2023ರಲ್ಲಿ ಪದವಿ, ಡಿಪೆÇ್ಲೀಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್‍ದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

2023ರಲ್ಲಿ ಪದವಿ/ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು, ಪದವಿ/ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು, ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾದವರಿಗೆ ಅಧ್ಯಯನ ಮಾಡಿದವರು) ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯನ್ನು ಪದವೀಧರರಿಗೆ 3000 ರೂ. ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ. ನೀಡಲಾಗುತ್ತದೆ.

Contact Your\'s Advertisement; 9902492681

ಅರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ/ಡಿಪ್ಲೋಮಾ ಪ್ರಮಾಣಪತ್ರಗಳ ಅವಶ್ಯಕ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಗೆ ಭೇಟಿ ನೀಡಿ ಹಾಗೂ ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here