ಮುಂಬೈ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಆಹ್ವಾನದ ಮೇರೆಗೆ ಗಣೇಶೋತ್ಸವದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ರಾಜ್ಯದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ರಾಜ್ಯದ ಇಂಧನ ಸಚಿವ ಚಂದ್ರಶೇಖರ್ ಕಿಶನ್ ರಾವ್ ಹಾಗೂ ನೀರಾವರಿ ಸಚಿವ ಗಿರೀಶ್ ದತ್ತಾತ್ರೇಯ ಮಹಾಜನ್ ಮೊದಲಾದವರು ಉಪಸ್ಥಿತರಿದ್ದರು.