ಶಾಸಕ ಎಂವೈ ಪಾಟೀಲ್ ಕಾರು ಅಪಘಾತ: ಆಸ್ಪತ್ರಗೆ ದಾಖಲು

0
1083

ಕಲಬುರಗಿ: ಶಾಲಾ ಕಾರ್ಯಕ್ರಮಕ್ಕೆ ಹೋಗುವಾಗ ಅಫಜಲಪುರ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಎಂವೈ ಪಾಟೀಲ್ ಚಲಿಸುತ್ತಿದ್ದ ಕಾರು ಅಪಘಾತ ಸಂಭವಿಸಿರುವ ಘಟನೆ ಅಫಜಲಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶುಕ್ರವಾರ ಮಧ್ಯಾಹ್ನ ಅಫಜಲಪೂರ ತಾಲೂಕಿನ ಜೇವರ್ಗಿ ಬಿ ಗ್ರಾಮದ ಹೊರವಲಯದಲ್ಲಿ ಅಪಘಾತ ಸಂಭವಿಸಿದ್ದು, ಶಾಸಕ ಎಂವೈ ಪಾಟೀಲ್ ಗೆ ಮುಖಕ್ಕೆ ಹಾಗೂ ಕಾಲಿಗೆ ಗಾಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Contact Your\'s Advertisement; 9902492681

ಜೇವರ್ಗಿ ಬಿ ಗ್ರಾಮದ ಹೊರವಲಯದಲ್ಲಿ ರಸ್ತೆ ಟರ್ನ್ ಮಾಡುವಾಗ ಕಂದಕ್ಕೆ ಉರುಳಿದ್ದು, ಕಾರಿನ ಗಾಜು ಪುಡಿಯಾಗಿದೆ ಎನ್ನಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here