ಕಲಬುರಗಿ: ಬೆಳಗಾವಿ ಜಿಲ್ಲೆಯಲ್ಲಿ ಹಲ್ಲೆಗೀಡಾದ ಅಂಗನವಾಡಿ ಕೇಂದ್ರದ ಸಹಾಯಕಿ ಸುನಂದಾಮೋರೆ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸಿ ಜಿಲ್ಲಾಡಳಿತದ ಮೂಲಕ ಗೃಹಸಚಿವರಿಗೆ ಮನವಿ ಸಲ್ಲಿಸಲಾಯಿತು.
ಶಾಂತಾ ಗಂಟೆ, ಗೌರಮ್ಮ ಪಾಟೀಲ, ರಾಜಮತಿ ಪಾಟೀಲ, ದೇವಮ್ಮ,ಸಾಬಮ್ಮ ಕಾಳಗಿ, ಅಕ್ಕಮಹಾದೇವಿ, ಮಹಾನಂದಾ ಸೇರಿದಂತೆ ಹಲವರು ಪಾಲ್ಗೊಂಡರು.