ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ ಮುಂದೂಡಿಕೆ

0
153

ಕಲಬುರಗಿ: ಸಾರ್ವಜನಿಕರ ಸಮಸ್ಯೆಯನ್ನು ಸ್ಥಳದಲ್ಲಿಯೇ ಬಗೆಹರಿಸುವ ನಿಟ್ಟಿನಲ್ಲಿ ಇದೇ ಜನವರಿ 9 ರಂದು ಕಲಬುರಗಿ ದಕ್ಷಿಣ ಮತ್ತು ಉತ್ತರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ “ಜನತಾ ದರ್ಶನ” ಮುಂದೂಡಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ತಿಳಿಸಿದ್ದಾರೆ.

ಅಂದು ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿರುವ ಕಾರಣ ಜನಸ್ಪಂದನ ಸಭೆ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here