ಜ.9ರ ಜನಸ್ಪಂದನ ಕಾರ್ಯಕ್ರಮ ಮುಂದೂಡಿಕೆ: ಶಾಸಕ ಅಲ್ಲಂಪ್ರಭು ಪಾಟೀಲ್‌

0
22

ಕಲಬುರಗಿ: ನಗರ ಸೇರಿದಂತೆ ಕಲಬುರಗಿ ದಕ್ಷಿಣ ಹಾಗೂ ಕಲಬುರಗಿ ಉತ್ತರ ವಿಧಾನ ವಿಧಾನ ಸಭಾ ಕ್ಷೇತ್ರದ ಜನರ ಸಮಸ್ಯೆ, ಅಹವಾಲು ಆಲಿಸಲು ಜ. 9 ರಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ನಡೆಯಬೇಕಿದ್ದ ಜನಸ್ಪಂದನ ಕಾರ್ಯಕ್ರಮ ಮುಂದೂಡಲಾಗಿದೆ.

ಅಂದು ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿರುವ ಕಾರಣ, ಗ್ರಾಮೀಣಾಭಿವೃದ್ಧಿ , ಪಂಚಾಯತ್‌ ರಾಜ್‌ ಹಾಗೂ ಐಟಿಬಿಟಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಉಸ್ತುವಾರಿಯಲ್ಲಿ ಹಾಗೂ ತಮ್ಮ ಹಾಗೂ ಉತ್ತರ ಶಾಸಕಿಯವರ ಉಪಸ್ಥಿತಿಯಲ್ಲಿ ನಡೆಯಬೇಕಿದ್ದ ಜನಸ್ಪಂದನ ಕಾರ್ಯಕ್ರಮ ಮುಂದೂಡಲಾಗಿದೆ, ಮುಂದಿನ ದಿನಾಂಕ ವನ್ನು ಆದಷ್ಟು ಬೇಗ ನಿರ್ಧರಿಸಿ ತಿಳಿಸಲಾಗುತ್ತದೆ, ಎಂದು ದಕ್ಷಿಣ ಮತ ಕ್ಷೇತ್ರದ ಶಾಸಕರಾದ ಅಲ್ಲಮ ಪ್ರಭು ಪಾಟೀಲ್ ಅವರು ಪತ್ರಿಕೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here