ಪ್ರತಿಯೊಬ್ಬರು ಮತದಾನ ಕುರಿತು ಜನರಲ್ಲಿ ಜಾಗೃತಿ. ಮೂಡಿಸಿ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

0
23

ಕಲಬುರಗಿ: ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿಯಿಂದ ಜಾಥಾ(ರ್ಯಾಲಿ) ಕಲಬುರಗಿ ನಗರದ ಜಗತ್ ವೃತ್ತದಿಂದ ಎಸ್.ವಿ.ಪಿ.ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮಂಗಳವಾರ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಜಿಲ್ಲಾಧಿಕಾರಿಯಾದ ಬಿ ಫೌಜಿಯಾ ತರನ್ನುಮ್ ಜಾಥಾಕ್ಕೆ ಚಾಲನೆ ನೀಡಿ, ಮಾತನಾಡಿ, ಮತದಾನ  ಸಂವಿಧಾನ ನೀಡಿರುವ ಹಕ್ಕು ಆಗಿದ್ದು ಅದನ್ನು ಅರ್ಹ ಮತದಾರರು ಮತದಾನ ಮಾಡಬೇಕು. ಮತದಾನದ ಕುರಿತು ಈಗಾಗಲೇ ಶಾಲಾ. ಕಾಲೇಜು ಸಾರ್ವಜನಿಕರಲ್ಲಿ ಗ್ರಾ.ಪಂ.ಮಟ್ಟದಲ್ಲಿ  ಸರಕಾದಿಂದ ಜಾಗೃತಿ ಮೂಡಿಸಲಾಗುತ್ತಿದೆ.

Contact Your\'s Advertisement; 9902492681

ಮತದಾನ ಪವಿತ್ರ ಕರ್ತವ್ಯವಾಗಿದ್ದು ಇದನ್ನು ಯಾರು ತಪ್ಪಿಸಿಕೊಳ್ಳದೆ ತಮ್ಮ ಹಕ್ಕು ಚಲಾವಣೆ ಮಾಡಬೇಕು ಇದರ ಬಗ್ಗೆ ಹೆಚ್ಚು ಹೆಚ್ಚು ಎಲ್ಲರೂ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯಿತ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಭಂವರ್ ಸಿಂಗ್ ಮೀನಾ ಮಾತನಾಡಿ, ಯಾರ ಹತ್ರ ಮತದಾನ ಚೀಟಿ ಇಲ್ಲದವರು ತಪ್ಪದೆ ಮತದಾರರ ಚೀಟಿ ಪಡೆದುಕೊಂಡು ಮತದಾನ ಮಾಡಬೇಕು ಎಂದರು.

ಈ  ಕಾರ್ಯಕ್ರಮದಲ್ಲಿ ಕಲಬುರಗಿ ಮಹಾನಾಗರ ಪಾಲಿಕೆಯ ಆಯುಕ್ತರಾದ   ಪಾಟೀಲ ಭುವನೇಶ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ ಕಲಬುರಗಿಯ ಜಿಲ್ಲೆಯ ಬ್ಲಾಕ್ ಶಿಕ್ಷಣ ಅಧಿಕಾರಿ ಸೈಯದ್ ಪಟೇಲ್,  ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ, ವಿದ್ಯಾರ್ಥಿಗಳು,    ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು  ಹಾಗೂ ಸಿಬ್ಬಂದಿ ವರ್ಗದವರು, ಕಾಲೇಜಿನ ಪ್ರಾಂಶುಪಾಲರು,ಶಿಕ್ಷರರು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here