ಜ.17 ರಂದು ಕನ್ನಡ ಜಾಗೃತಿ ಅಭಿಯಾನ

0
24

ಕಲಬುರಗಿ: ಕನ್ನಡ ಭಾಷೆ ಬಗ್ಗೆ ಮಕ್ಕಳಲ್ಲಿ ಅಭಿಮಾನ ಮೂಡಿಸುವ ನಿಟ್ಟಿನಲ್ಲಿ ಕನ್ನಡ ಭೂಮಿ ಜಾಗೃತಿ ಸಮಿತಿ ವತಿಯಿಂದ ಜ.17 ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ರಾಜಾಪೂರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಕನ್ನಡ ಜಾಗೃತಿ ಅಭಿಯಾನ ಹಾಗೂ ಹಳೆಯ ವಿದ್ಯಾರ್ಥಿಗಳ ಬಳಗದಿಂದ ಬಡ ವಿದ್ಯಾರ್ಥಿಗಳಿಗೆ 158 ಶಾಲಾ ಚೀಲಗಳ (ಸ್ಕೂಲ್ ಬ್ಯಾಗ್) ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ನಗರ ಅಧ್ಯಕ್ಷ ಪರಮೇಶ್ವರ ಹಡಪದ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆ ಉಳಿಸುವುದು ಹಾಗೂ ಸರಕಾರಿ ಕನ್ನಡ ಮಾಧ್ಯಮದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡುವ ಉದ್ದೇಶ ಹೊಂದಲಾಗಿದೆ.ಅಂದು ನಡೆಯುವ ಕಾರ್ಯಕ್ರಮವನ್ನು ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಉದ್ಘಾಟಿಸುವರು.

Contact Your\'s Advertisement; 9902492681

ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಹಾಗೂ ಮಾಜಿ ಕೆಕೆಆರ್ ಡಿಬಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಬಡ ಮಕ್ಕಳಿಗೆ ಶಾಲಾ ಚೀಲಗಳನ್ನು ವಿತರಿಸುವರು.

ಮುಖ್ಯ ಅತಿಥಿಗಳಾಗಿ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ, ಕಾಂಗ್ರೆಸ್ ಮುಖಂಡ ನೀಲಕಂಠ ಮೂಲಗೆ, ಮಹಾನಗರ ಪಾಲಿಕೆ ಸದಸ್ಯರಾದ ವೀರಣ್ಣ ಹೊನ್ನಳ್ಳಿ, ಶ್ರೀಮತಿ ಹೊನ್ನಮ್ಮ ಬಾಬು ಹಾಗರಗಿ ಆಗಮಿಸುವರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗರಾಜ ಸಿರಗಾಪೂರ ವಹಿಸುವರು. ಕನ್ನಡ ಜಾನಪದ ಪರಿಷತ್ ಜಿಲ್ಲಾ ಅಧ್ಯಕ್ಷ ಎಂ.ಬಿ.ನಿಂಗಪ್ಪದಕ್ಷೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯರು ಅತಿಥಿಗಳಾಗಿ ಭಾಗವಹಿಸುವರು.

ಇದೇ ಸಂದರ್ಭದಲ್ಲಿ ಎಲೆ ಮರೆ ಕಾಯಿಯಂತೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಸಾಧಕರನ್ನು ಸನ್ಮಾನಿಸಲಾಗುವುದು.ಹಿರಿಯರಾದ ಸಿದ್ಧರೋಮ ಮಹಾಂತಗೋಳ,ಸಮಿತಿ ಜಿಲ್ಲಾ ಅಧ್ಯಕ್ಷ ಪ್ರಶಾಂತ್ ತಂಬೂರಿ, ಉ.ಕ.ಅಧ್ಯಕ್ಷ ಜಯರಾಜ ಕಿಣಿಗೀರ, ವಕ್ತಾರ ಆನಂದ ತೇಗನೂರ,ನಗರ ಕಾರ್ಯದರ್ಶಿ ಅಮೀತ ನೀಲೂರ ಮತ್ತು ಶಾಲೆಯ ವಿದ್ಯಾರ್ಥಿಗಳು,ಶಿಕ್ಷಕರು ಹಾಗೂ ಶಿಕ್ಷಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here