ಕಲಬುರಗಿ: ಡಾ. ಬಸಪ್ಪ ದಾನಪ್ಪ ಜತ್ತಿ (ಬಿ.ಡಿ. ಜತ್ತಿ)ಯವರ ೧೦೭ನೇ ಜನ್ಮ ದಿನೋತ್ಸವದ ಅಂಗವಾಗಿ ಸೆ. 10 ರಂದು ಸಂಜೆ ೫.೩೦ಕ್ಕೆ ಜಯನಗರದ ಅನುಭವ ಮಂಟಪದಲ್ಲಿ ಬಸವ ಸಮಿತಿ ಸಂಸ್ಥಾಪಕರ ದಿನಾಚರಣೆ ಹಾಗೂ ಡಾ. ಬಿ.ಡಿ. ಜತ್ತಿ ಸಂಶೋಧನ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಬಸವ ಸಮಿತಿ ಜಾಲತಾಣ ಹಾಗೂ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಹಾಗೂ ಕಲ್ಬುರ್ಗಿ ಬಸವ ಸಮಿತಿ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ತಿಳಿಸಿದ್ದಾರೆ.
ಬೆಂಗಳೂರಿನ ಬೇಲಿಮಠ ಮಹಾ ಸಂಸ್ಥಾನದ ಡಾ. ಶಿವರುದ್ರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಡಾ. ವಿಲಾಸವತಿ ಖೂಬಾ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ವೀರಣ್ಣ ದಂಡೆ ಹಾಗೂ ಡಾ. ಜಯಶ್ರೀ ದಂಡೆ ಅವರು ರಚಿಸಿದ “೧೨ನೇ ಶತಮಾನದ ಶರಣ ಸ್ಮಾರಕಗಳು” ಸಂಶೋಧನ ಸಂಪುಟಗಳ ಲೋಕಾರ್ಪಣೆಯನ್ನು ಸಂಸದ ಡಾ. ಉಮೇಶ ಜಾಧವ ಲೋಕಾರ್ಪಣೆ ಮಾಡಲಿದ್ದಾರೆ. ರಾಜ್ಯಸಭೆಯ ಮಾಜಿ ಸದಸ್ಯ ಬಸವರಾಜ ಪಾಟೀಲ ಸೇಡಂ ಅವರು ಬಸವ ಸಮಿತಿ ಜಾಲತಾಣ ಉದ್ಘಾಟಿಸಲಿದ್ದಾರೆ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಬಸವೇಶ್ವರ ಪೀಠದ ಸಂಚಾಲಕ ಡಾ. ಸಿ.ಎಂ. ಕುಂದಗೋಳ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇವೇಳೆಯಲ್ಲಿ ಡಾ. ವೀರಣ್ಣ ದಂಡೆ ಮತ್ತು ಡಾ. ಜಯಶ್ರೀ ದಂಡೆ ಅವರಿಗೆ ಡಾ. ಬಿ.ಡಿ. ಜತ್ತಿ ಸಂಶೋಧನ ಪ್ರಶಸ್ತಿ ಹಾಗೂ ಜಯದೇಔಪ್ಪ ಜೈನಕೇರಿ ಅವರಿಗೆ ಬಸವಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.