ಕಲಬುರಗಿ: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠಾಪನೆಯ ನಿಮಿತ್ಯ ನಗರದ ಜೇವರ್ಗಿ ರಸ್ತೆಯಲ್ಲಿರುವ ರಾಮ ಮಂದಿರದಲ್ಲಿ ಅದ್ಧೂರಿ ಪೂಜಾ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಸಂಸದ ಡಾ.ಉಮೇಶ ಜಾಧವ, ಬಿಜೆಪಿ ನಗರ ಅಧ್ಯಕ್ಷ ಚಂದು ಪಾಟೀಲ ಸೇರಿದಂತೆ ನೂರಾರು ಜನ ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದುಕೊಂಡರು.