ಅಂಬೇಡ್ಕರ್ ಪುತ್ಥಳಿಗೆ ಅಪಮಾನ; ಕಲಬುರಗಿ ಸಂಪೂರ್ಣ ಸ್ತಬ್ಧ

0
369

ಕಲಬುರಗಿ; ನಗರದ ಹೊರವಲಯದಲ್ಲಿರುವ ಕೋಟನೂರ್ (ಡಿ) ಗ್ರಾಮದಲ್ಲಿನ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಪತ್ಥಳಿಗೆ ಕಿಡಿಗೇಡಿಗಳು ಅಪಮಾನ ಮಾಡಿರುವ ಘಟನೆ ನಡೆದಿದೆ.

ಸಂವಿಧಾನ ಶಿಲ್ಪಿ ಬಾಬಾ ಸಾಹೆಬ್ ಅಂಬೇಡ್ಕರ್ ಭಾವ ಚಿತ್ರಕ್ಕೆ ಚಪ್ಪಲಿ ಹಾರಹಾಕಿ ಅಪಮಾನ ಮಾಡಲಾಗಿದೆ ಎನ್ನಲಾಗಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಇಂದು ಬೆಳಿಗ್ಗೆಯಿಂದ ರಾಮ ಮಂದಿರ, ಫರತಹಬಾದ್, ಜೇವರ್ಗಿ ತಾಲ್ಲೂಕು, ತೀಮ್ಮಾಪುರಿ ಸರ್ಕಲ್, ಜಗತ್ ಸೇರಿದಂತೆ ಜಿಲ್ಲಾದ್ಯಂತ ಬೃಹತ್ ಪ್ರತಿಟನೆಗಳು, ಸಂಚಾರ ಮತ್ತು ಮಳಿಗೆಗಳು ಬಂದ್ ಮಾಡಿಸಿ ಟೈರ್ ಗೆ ಬೆಂಕಿ ಹಚ್ಚಿ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನೂಮ್, ಪೊಲೀಸ್ ಆಯುಕ್ತರು, ಎಸ್. ಪಿ ಸೇರಿದಂತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಡೀ ದೇಶಕ್ಕೆ ಸಂವಿಧಾನ ನೀಡಿ ಭಾರತೀಯರಿಗೆ ಮಹದುಪಕಾರ ಮಾಡಿರುವ ಮಾನವತಾವಾದಿ ಅಂಬೇಡ್ಕರ್ ಅವರು ಎಲ್ಲಾ ಜನಸಮುದಾಯವರಿಗೂ ಆರಾಧ್ಯರು ಆಗಿದ್ದಾರೆ. ಆದರೆ ಯಾರೋ ಕಿಡಿಗೇಡಿಗಳು, ಮತಿಹೀನರು ರಾತ್ರಿ ಹೊತ್ತಲ್ಲಿ ಹೋಗಿ ಅಂಬೇಡ್ಕರ್ ಪುತ್ಥಳಿಯನ್ನು ಅಪಮಾನಿಸಿ ದ್ರೋಹ ಎಸಗಿದ್ದಾರೆ.ಇಂತಹ ಮತಿಹೀನ ಕೆಲಸಗಳಿಂದ ಸಮಾಜದಲ್ಲಿ ಅಶಾಂತಿ ಹುಟ್ಟು ಹಾಕುವ ಪ್ರಯತ್ನ ಕಿಡಿಗೇಡಿಗಳು ಮಾಡಿದ್ದಾರೆ.

ಪೊಲೀಸರು ಸಂಪೂರ್ಣ ತನಿಖೆ ನಡೆಸಿ, ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಾನೂನು ಪ್ರಕಾರ ಶಿಕ್ಷೆಗೊಳಪಡಿಸಬೇಕು. ಅಂಬೇಡ್ಕರ್ ಪುತ್ಥಳಿಗೆ ಮಾಡುವ ಅಪಮಾನ ಇಡೀ ನಾಗರಿಕ ಸಮಾಜಕ್ಕೆ ಮಾಡುವ ಅಪಮಾನವಾದಂತೆ ಇಂತಹ ಅನಾಗರಿಕ ಪ್ರವೃತ್ತಿಯನ್ನು ನಾವು ಎಲ್ಲರೂ ಸೇರಿಕೊಂಡು ಖಂಡಿಸಲೇಬೇಕು ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ ಪತ್ರಿಕಾ ಪ್ರಕಟಣೆ ಮೂಲಕ ಖಂಡಿಸಿ ಆರೋಪಿಗಳ ಮತ್ತೆಗೆ ಒತ್ತಾಯಿಸಿದ್ದಾರೆ.

ಶ್ರೀರಾಮ ಮೆರವಣಿಗೆ ವೇಳೆ ಸೋಮವಾರ ವಾಡಿಯಲ್ಲಿ ಗಲಾಟೆ ಸಂಭವಿಸಿರುವ ಹಿನ್ನೆಲ್ಲೆಯಲ್ಲಿ ಜಿಲ್ಲಾಡಳಿತ ಪಟ್ಟಣದಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿದ್ದು. ಕಲಬುರಗಿ ಜಿಲ್ಲೆ ಬುದ್ದಿಮುಚ್ಚಿದ ಕೆಂಡದಂತವಾತಹ ವಾತಾವರಣವಾಗಿದೆ.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here