ಸುರಪುರ: ಈಗಾಗಲೆ ಸತತ ಬರಗಾಲದಿಂದ ಕಂಗೆಟ್ಟಿದ್ದ ರೈತರು ತಮ್ಮ ಜಮೀನುಗಳಲ್ಲಿ ಅಷ್ಟೊ ಇಷ್ಟೊ ಬೆಳೆ ಬೆಳೆಯುತ್ತಿರುವಾಗ ಮಹಾರಾಷ್ಟ್ರದಲ್ಲಿ ಸುರಿದ ಮಹಾಮಳೆಯಿಂದಾಗಿ ರೈತರ ಎಲ್ಲಾ ಬೆಳೆ ಕೊಚ್ಚಿ ಹೋಗಿದ್ದು,ರೈತರು ಮತ್ತಿಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಬರಬೇಕಾದ ಸರಕಾರ ನಿರ್ಲಕ್ಷ್ಯ ತೋರಿದೆ.ಇದನ್ನು ಖಂಡಿಸಿ ಜಾತ್ಯಾತೀತ ಜನತಾದಳ ದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ತಾಲ್ಲೂಕು ಮಹಾಪ್ರಧಾನ ಕಾರ್ಯದರ್ಶಿ ವೆಂಕಟೇಶ ಭಕ್ರಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಪ್ಟೆಂಬರ್ ೦೯ರ ಸೋಮವಾರ ಬೆಳಿಗ್ಗೆ ಹನ್ನೊಂದು ಗಂಟೆಗೆ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು.ಪ್ರತಿಭಟನೆಯ ಮೂಲಕ ರಾಜ್ಯ ಮತ್ತು ಕೇಂದ್ರ ಸರಕಾರ ಕೂಡಲೆ ನೆರೆ ಸಂತ್ರಸ್ಥರಿಗೆ ಮನೆಗಳ ನಿರ್ಮಿಸಿ ಕೊಡಬೇಕು ಮತ್ತು ರೈತರಿಗೆ ಬೆಳೆ ಪರಿಹಾರ ನೀಡಬೇಕೆಂದು ಆಗ್ರಹಿಸಲಾಗುವುದು.ಅಲ್ಲದೆ ಸುಮಾರು ಒಂದು ತಿಂಗಳಿಂದ ಸುರಪುರ ನಗರಕ್ಕೆ ಕುಡಿಯುವ ನೀರಿನ ಸರಬರಾಜಿಲ್ಲದೆ ಜನ ತತ್ತರಿಸಿದ್ದಾರೆ.ಇದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು.ಆದ್ದರಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ.