ಮಾಡಬೂಳ ಪೊಲೀಸ್ ಠಾಣೆ; ದ್ವಿಚಕ್ರ ವಾಹನ ವಾರಸುದಾರರ ಪತ್ತೆಗೆ ಮನವಿ

0
15
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ತಾಲೂಕಿನ ಮಾಡಬೂಳ ಪೊಲೀಸ್ ಠಾಣೆಯಲ್ಲಿ ವಿವಿಧ ಸಂದರ್ಭಗಳಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಮಾಡಬೂಳ್ ಠಾಣೆಯ ಆವರಣದಲ್ಲಿ ವಿವಿಧ ಕಂಪನಿಗಳಿಗೆ ಸೇರಿರುವ ಸುಮಾರು 15 ದ್ವಿಚಕ್ರ ವಾಹನಗಳನ್ನು ಸಂಬಂಧಪಟ್ಟ ವಾರಸುದಾರರಿಗೆ ಒಪ್ಪಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ವಾಹನಗಳ ಮಾಲೀಕರು ಸೂಕ್ತ ದಾಖಲೆಗಳನ್ನು ತೋರಿಸಿ ತೆಗೆದುಕೊಂಡು ಹೋಗಬೇಕು ಎಂದು ಮಾಡಬೂಳ ಪೊಲೀಸ್ ಠಾಣೆಯ ಸಿಪಿಐ ಜಗದೇವಪ್ಪ ಪಾಳಾ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಜ.31ರೊಳಗೆ ತಮ್ಮ ದ್ವಿಚಕ್ರ ವಾಹನಗಳಿಗೆ ಸಂಬಂಧಪಟ್ಟ ಅಗತ್ಯ ದಾಖಲಾತಿಯೊಂದಿಗೆ ಮಾಡಬೂಳ ಪೊಲೀಸ್‌ ಠಾಣೆಗೆ ಭೇಟಿ ನೀಡಬೇಕು ಎಂದು ಅವರು ಕೋರಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here