ಕುಷ್ಠ ರೋಗದ ಬಗ್ಗೆ ಯಾವುದೇ ಕೀಳರಿಮೆ ಬೇಡ

0
12

ಸುರಪುರ:ಕುಷ್ಠ ರೋಗವು ಗುಣಪಡಿಸಬಹುದಾದ ರೋಗವಾಗಿದ್ದು ಯಾರು ಕೂಡ ಕುಷ್ಠ ರೋಗದ ಬಗ್ಗೆ ಕೀಳರಿಮೆ ಹೊಂದುವುದು ಬೇಡ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ ತಿಳಿಸಿದರು.

ನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಕುಷ್ಠ ರೋಗ ನಿಯಂತ್ರಣ ಕಾರ್ಯಾಲಯ ಇವರುಗಳ ವತಿಯಿಂದ ಹಮ್ಮಿಕೊಂಡಿದ್ದ ಸ್ಪರ್ಶ ಕುಷ್ಠ ಅರಿವು ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ

Contact Your\'s Advertisement; 9902492681

ಇದೇ ಜನೆವರಿ 30 ರಿಂದ ಫೆಬ್ರವರಿ 13ರ ವರೆಗೆ ಪಾಕ್ಷಿಕ ದಿನ ಸ್ಪರ್ಶ ಕುಷ್ಠ ರೋಗದ ಕುರಿತು ಜಾಗೃತಿ ಅಭಿಯಾನ ನಡೆಯಲಿದೆ,ನಗರದ ಎಲ್ಲಾ ವಾರ್ಡ್‍ಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಕುಷ್ಠ ರೋಗದ ಬಗ್ಗೆ ಅರಿವು ಮೂಡಿಸುವುದು,ಕುಷ್ಠ ರೋಗದ ಲಕ್ಷಣಗಳಾದ ಚರ್ಮದ ಮೇಲಿನ ಯಾವುದೇ ಘಂಟುಗಳು,ಕಣ್ಣಿನ ರೆಪ್ಪರಗಳನ್ನು ಮುಚ್ಚುವಲ್ಲಿ ತೊಂದರೆ,ಕೈ ಅಥವಾ ಕಾಲುಗಳಲ್ಲಿ ಬೆರಳು ಮಡಚಿಕೊಳ್ಳುವುದು,ನಡೆಯುವಾಗ ಕಾಲು ಎಳೆಯುವುದು,ಕೈ ಅಥವಾ ಕಾಲುಗಳಲ್ಲಿ ಜುಮ್ಮೆನುಸುವಿಕೆ,ಮರಗಟ್ಟುವಿಕೆ,ಅಂಗೈ ಅಥವಾ ಬಲಹೀನತೆ ಇವೆಲ್ಲವೂ ಕುಷ್ಠ ರೋಗದ ಲಕ್ಷಣಗಳಾಗಿವೆ,ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದರು.

ಜನರಲ್ಲಿ ಈ ರೋಗದ ಬಗ್ಗೆ ಬಹಳ ಕೀಳರಿಮೆ ಇದೆ,ಜಾಗೃತಿ ಮೂಡಿಸಿ ಸೂಕ್ತ ಚಿಕಿತ್ಸೆ ನೀಡುವುದು ನಮ್ಮ ಇಲಾಖೆಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕುಷ್ಠ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕುರಿತು ಪ್ರಮಾಣ ವಚನ ಸ್ವೀಕರಿಸಲಾಯಿತು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಯಾ ಪವರ್,ಬಿ.ಹೆಚ್.ಇ.ಓ ಮಲ್ಲಪ್ಪ,ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜಶೇಖರ,ಆರೋಗ್ಯ ನಿರೀಕ್ಷಣಾಧಿಕಾರಿ ಸುರೇಶ ಖಾದಿ,ಹಣಮಂತ ಅನವಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here