ಕಲಬುರಗಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಂ ಮಂಡಿಸಿದ ಪ್ರಸಕ್ತ ಸಾಲಿನ ಮಧ್ಯಂತರ ಬಜೆಟ್ ನಲ್ಲಿ ದೂರದೃಷ್ಟಿಯ ಯೋಜನೆಗಳಿದ್ದರೂ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಕೊಡುಗೆ ನೀಡದೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅನ್ಯಾಯ ಮಾಡಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ಆರೋಪಿಸಿದ್ದಾರೆ
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕಲಬುರಗಿಯ ರೈಲ್ವೆ ವಿಭಾಗೀಯ ಕಚೇರಿಗೆ ಕೇವಲ 1000 ರೂ ನೀಡಿ ಮತ್ತೆ ನಿರ್ಲಕ್ಷ್ಯ ಧೋರಣೆ ಅನುಸರಿಸಲಾಗಿದೆ.ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ರೀತಿ ಬಜೇಟ್ ಮಂಡನೆ ಹುಸಿಯಾಗಿದೆ.ಕಲ್ಯಾಣ ಕರ್ನಾಟಕ ಕೇಂದ್ರೀಯ ವಿಭಾಗ ಆದರೆ ಕಲಬುರಗಿ ಜಿಲ್ಲೆಗೆ ಏಮ್ಸ್,ಹೊಸ ಕೈಗಾರಿಕೆಗಳ ಸ್ಥಾಪನೆ, ರೈಲ್ವೆ ವಿಭಾಗೀಯ ಕಚೇರಿ ಬಗ್ಗೆ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡದಿರುವುದು ಇಲ್ಲಿಯ ಜನರಿಗೆ ಬೇಸರ ತಂದಿದೆ.ಅಲ್ಲದೆ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿಲ್ಲ.ಜಿಲ್ಲೆಯಲ್ಲಿ ತೊಗರಿ ಪಾರ್ಕ್ ಮಾಡಬಹುದು ಎಂಬ ನಿರೀಕ್ಷೆ ಇತ್ತು.ಮತ್ತೋಮ್ಮೆ ಕೇಂದ್ರ ಸರ್ಕಾರ ಸಂಪೂರ್ಣ ಕಡೆಗಣಿಸಿದೆ.ರಾಜ್ಯಕ್ಕೂ ಹೇಳಿಕೊಳ್ಳುವಂಥ ವಿಶೇಷತೆ ಎನು ನೀಡಿಲ್ಲ.ಕೃಷಿ ಮತ್ತು ಹೈನುಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡಿರುವುದು ಸಮಾಧಾನ ತಂದಿದೆ.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕಲಬುರಗಿ ಹೊರವಲಯದ ಹೊಸ ರಿಂಗ್ ರೋಡ್ ಕುರಿತು ಬಜೆಟ್ ನಲ್ಲಿ ತಿಳಿಸಿಲ್ಲ.ರೈತರ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಿಲ್ಲ.ರೈತರಿಗೆ ಹೊಸ ಆರ್ಥಿಕ ನೆರವು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.