ರುಕ್ಮಾಪುರ: ಹಳೆ ವಿದ್ಯಾರ್ಥಿಗಳ ಸಭೆ ನಾಳೆ

0
16

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಶ್ರೀ ಕೊಟ್ಟೂರು ಬಸವೇಶ್ವರ ಶಿಕ್ಷಣ ಸಂಸ್ಥೆಯ ಶ್ರೀಮತಿ ಭೀಮಬಾಯಿ ನಾರಾಯಣಪ್ಪ ಭಂಡಾರೆ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಭೆಯನ್ನು ಫೆ.೪ರಂದು ಬೆಳಿಗ್ಗೆ ೧೦.೩೦ಕ್ಕೆ ಶಾಲೆಯ ಆವರಣದಲ್ಲಿ ಕರೆಯಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರೂ ಆದ ನಿವೃತ್ತ ಎಸ್ಪಿ ಚಂದ್ರಕಾಂತ ಎನ್. ಭಂಡಾರೆ ಅವರು ವಹಿಸಲಿದ್ದಾರೆ. ಸಂಸ್ಥೆಯ ನಿರ್ದೇಶಕರೂ, ಸದಸ್ಯರೂ ಪಾಲ್ಗೊಳ್ಳಲಿದ್ದಾರೆ. ಶಾಲೆಯಲ್ಲಿ ಓದಿದ ಎಲ್ಲಾ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿ, ಹಳೆ ವಿದ್ಯಾರ್ಥಿಗಳ ಸಂಘ ರಚನೆ, ಶಾಲೆ ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಲಹೆ ಸಹಕಾರ ನೀಡಬೇಕೆಂದು ಸಂಸ್ಥೆಯ ಕಾರ್ಯದರ್ಶಿ ಅವರು ಮನವಿ ಮಾಡಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here