ಸುರಪುರ: ನಗರದ ಉದ್ದಾರ ಓಣಿಯಲ್ಲಿ ಕಾರ್ಮಿಕ ಇಲಾಖೆ,ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಆರೋಗ್ಯ ಇಲಾಖೆಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು.
ನೂರಕ್ಕೂ ಹೆಚ್ಚು ಜನ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಯಿತು.ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಮುಬಿನ್ ದಖನಿ,ಧರ್ಮರಾಜ ಮಂಗಿಹಾಳ,ಸುಮಿತ್ ಝಂಡದಕೇರ,ವೈಜನಾಥ ಹೊಸ್ಮನಿ,ಶ್ರೀನಿವಾಸ ಜಾಲಗಾರ,ಭೀಮರಾಯ ಹುದ್ದಾರ ಸೇರಿದಂತೆ ಅನೇಕ ಜನ ಕಟ್ಟಡ ಕಾರ್ಮಿಕರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಆರೋಗ್ಯ ತಪಾಸಣೆಗೆ ಆಗಮಿಸಿದ್ದ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ಮುಖಂಡರು ಸನ್ಮಾನಿಸಿ ಗೌರವಿಸಿದರು.