ನಿಗಮಗಳ ಮೂಲಕ ಸೌಲಭ್ಯಗಳ ಪಡೆಯಲು ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ; ಕಾಂತರಾಜು ಕೆಜಿಎಸ್

0
20

ಕಲಬುರಗಿ: ವರ್ಷದಿಂದ ವರ್ಷಕ್ಕೆ ವಿವಿಧ ನಿಗಮಗಳ ಮೂಲಕ ನೀಡಲಾಗುತ್ತಿರುವ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದ್ದು, ನಿಗಮಗಳಿಗೆ ಈ ಬಜೆಟ್‍ನಲ್ಲಿ ಹೆಚ್ಚುವರಿ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕಾಂತರಾಜು ಕೆಜಿಎಸ್ ಅವರು ತಿಳಿಸಿದರು.

ನಗರದಲ್ಲಿ ಸೋಮವಾರ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಒಕ್ಕಲಿಗ ಅಭಿವೃದ್ಧಿ ನಿಗಮ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಮರಾಠ ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮಗಳ ಕಲಬುರಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

Contact Your\'s Advertisement; 9902492681

2024–25ನೇ ಸಾಲಿಗೆ ದೇವರಾಜ ಅರಸು ನಿಗಮಕ್ಕೆ 600 ಕೋಟಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 315 ಕೋಟಿ, ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ 500 ಕೋಟಿ, ಮರಾಠ ಅಭಿವೃದ್ಧಿ ನಿಗಮಕ್ಕೆ 315 ಕೋಟಿ ಒದಗಿಸುವಂತೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.

ಈಗ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಪ್ರಸಕ್ತ ವರ್ಷ 100 ಕೋಟಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮಕ್ಕೆ ತಲಾ 60 ಕೋಟಿ, ಮರಾಠ ಅಭಿವೃದ್ಧಿ ನಿಗಮಕ್ಕೆ 50 ಕೋಟಿ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ 13 ಕೋಟಿ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ 9 ಕೋಟಿ ಹಾಗೂ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ 14 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಮರೇಗೌಡ ಮಾಲಿಪಾಟೀಲ ಅವರು ಮಾತನಾಡಿ, ‘ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಯುವುದು ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ ಟ್ಯಾಕ್ಸಿ ನೀಡುವುದಕ್ಕೆ ಹೆಚ್ಚು ಬೇಡಿಕೆ ಇದೆ. ಗಂಗಾ ಕಲ್ಯಾಣಕ್ಕೆ 18 ಸಾವಿರ, ಸ್ವಾವಲಂಬಿ ಸಾರಥಿ ಯೋಜನೆಗೆ 8 ಸಾವಿರ ಅರ್ಜಿಗಳು ಬಂದಿವೆ. ಲಭ್ಯ ಅನುದಾನದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ಎರಡು ಟ್ಯಾಕ್ಸಿಗಳನ್ನು ನೀಡಬಹುದಾಗಿದೆ‘ ಎಂದು ಹೇಳಿದರು.

ಒಕ್ಕಲಿಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಮೇಶ ಸಂಗಾ ಮಾತನಾಡಿ, ಫೆಬ್ರವರಿ 12ರಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ ಫಲಾನುಭವಿಗಳ ಆಯ್ಕೆಪಟ್ಟಿಗೆ ಕ್ಷೇತ್ರದ ಶಾಸಕರಿಂದ ಅನುಮೋದನೆ ಪಡೆದು ನಿಗಮಕ್ಕೆ ಕಳುಹಿಸಿಕೊಡಬೇಕು‘ ಎಂದು ಸೂಚನೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಮರೇಗೌಡ ಹೆಚ್. ಮಾಲಿಪಾಟೀಲ, ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಕಾಶ ಆರ್. ಪಾಗೋಜಿ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಗೀತಾ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರದ ಎಸ್. ಭಾವನಾ, ಕಲಬುರಗಿ ವಿಭಾಗದ ಸಹಾಯ ಪ್ರಧಾನ ವ್ಯವಸ್ಥಾಪಕರರು ಕಲಬುರಗಿ, ಬಳ್ಳಾರಿ , ಬೀದರ , ರಾಯಚೂರು, ಕೊಪ್ಪಳ, ಯಾದಗಿರಿ ವಿಜಯಗನಗರ ಜಿಲ್ಲೆಗಳ ಜಿಲ್ಲಾ ವ್ಯವಸ್ಥಾಪಕರು ಅಭಿವೃದ್ದಿ ಅಧಿಕಾರಿಗಳು ಸಹಾಯಕ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here