ಕಲಬುರಗಿ 20ನೇ ಕನ್ನಡ ಸಾಹಿತ್ಯ ಸಮ್ಮೇಳನ; ಐತಿಹಾಸಿಕ ಸ್ಥಳಗಳನ್ನೊಳಗೊಂಡಿರುವ ಲಾಂಛನ ಬಿಡುಗಡೆ

0
426

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ.26 ಮತ್ತು 27 ರಂದು ನಗರದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿರುವ ಕಲಬುರಗಿ ಜಿಲ್ಲಾ 20 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಖ್ಯಾತ ಕಲಾವಿದ ಡಾ. ರೆಹಮಾನ್ ಪಟೇಲ್ ಅವರು ಸಿದ್ಧಪಡಿಸಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳನ್ನೊಳಗೊಂಡಿರುವ ಲಾಂಛವನ್ನು ಗುರುವಾರ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು, ಕನ್ನಡ ಭಾಷೆಯ ಬೆಳವಣಿಗೆಗಾಗಿ ಕನ್ನಡ ಸಾಹಿತ್ಯ ಪರಿಷತ್ತು ಉತ್ತಮ ಕಾರ್ಯ ಮಾಡುತ್ತಿದೆ. ಕನ್ನಡ ಭಾಷೆ ನಾವುಗಳು ಹೆಚ್ಚೆಚ್ಚು ಬಳಸಿದಷ್ಟು ಬೆಳೆಯುತ್ತದೆ. ನಮ್ಮ ಕನ್ನಡ ಭಾಷೆ ಸಾಮರಸ್ಯದ ಸಂಕೇತವಾಗಿದೆ. ಕನ್ನಡ ಸಾಹಿತ್ಯಕ್ಕೆ ವಿಶೇಷ ಕೊಡುಗೆ ಕೊಟ್ಟ ನೆಲ ಕಲಬುರಗಿ ನೆಲವಾಗಿದ್ದು, ಈ ನೆಲದ ಇತಿಹಾಸ ಮತ್ತು ಪರಂಪರೆಯನ್ನು ಹೊಸ ಪೀಳಿಗೆಗೆ ಮುಟ್ಟಿಸುವ ಪ್ರಯತ್ನ ಸಮ್ಮೇಳನದ ಮೂಲಕ ಆಗಲಿ ಎಂದು ಆಶಿಸಿದರು.

Contact Your\'s Advertisement; 9902492681

ಮುಂದುವರೆದು ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರ ನೇತೃತ್ವದ ಜಿಲ್ಲೆಯ ಪದಾಧಿಕಾರಿಗಳು ಬಹಳ ಉತ್ಸಾಹದಿಂದ ಕೂಡಿದ್ದಾರೆ. ಆ ಕಾರಣಕ್ಕಾಗಿಯೇ ಜಿಲ್ಲೆಯಲ್ಲಿ ನಿತ್ಯ ನೂತನ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗುತ್ತಿದೆ. ಸಮ್ಮೇಳನದ ಯಶಸ್ವಿಗೆ ಸಹಕರಿಸುವುದಾಗಿ ಹೇಳಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಯೋಜಿಸಿ ಪ್ರಚಲಿತ ವಿದ್ಯಮಾನಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡುವ ಮೂಲಕ, ಸಮಾಜದ ನೋಂದವರ ನೋವಿಗೆ ಧ್ವನಿಯಾಗುವ ಮತ್ತು ಸ್ಪಂದಿಸುವ ಕಾರ್ಯ ಮಾಡಲಾಗುತ್ತಿದೆ ಎಂದ ಅವರು, ಆಡಂಬರವಲ್ಲದ ಅರ್ಥಪೂರ್ಣ ಸಮ್ಮೇಳನ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಎಸ್ ಅಂಡಗಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಪ್ರತಿನಿಧಿ ಡಾ.ರೆಹಮಾನ್ ಪಟೇಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here