ಕಲಬುರಗಿ: ಮತ್ತೆ ವಿವಾದಕ್ಕೆ ಕಾರಣವಾಗುತ್ತಿರುವ ಆಳಂದ ಪಟ್ಟಣದ ಪ್ರಸಿದ್ಧ ಸೂಫಿ ಹಜರತ್ ಲಾಡ್ಲೆ ಮಶಾಕ್ (ರ.ಅ) ದರ್ಗಾದ ಆವರಣದಲ್ಲಿ ರಾಘವ ಚೈತನ್ಯ ದೇವಸ್ಥಾನ ನಿರ್ಮಾಣಕ್ಕೆ ಶಿವರಾತ್ರಿಯಂದು ಅಡಿಗಲ್ಲು ಮಾಡುತ್ತೆವೆ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಭಾನುವಾರ ನಗರದಲ್ಲಿ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನೂರಾರು ವರ್ಷದ ಹಿಂದಿನ ಪವಿತ್ರ ಕ್ಷೇತ್ರವಾಗಿದೆ. ಕಳೆದ ವರ್ಷ ಕೋರ್ಟ್ ಪೂಜೆ ಮಾಡಲಿಕ್ಕೆ ಅನುಮತಿ ಕೊಟ್ಟಿದೆ. ಆ ಸ್ಥಳದಲ್ಲಿ ಈಶ್ವರ ಲಿಂಗ ಇದ್ದ ಮೇಲೆ ಜೀರ್ಣೋದ್ಧಾರ, ದೇವಸ್ಥಾನ ಮಾಡೋದು ನಮ್ಮ ಕರ್ತವ್ಯ ಅದು ಮುಂದುವರೆದ ಭಾಗ ಶಿವರಾತ್ರಿ ದಿನ ಗುದ್ದಲಿ ಪೂಜೆಯಿಂದ ಪ್ರಾರಂಭ ಮಾಡುತ್ತೇವೆ ಎಂದಿದ್ದಾರೆ.
ರಾಘವ ಚೈತನ್ಯ ಈಶ್ವರ ಲಿಂಗ ಪ್ರತಿಷ್ಠಾಪನೆ ಮಾಡಿದ ಸ್ಥಳ ಇದೆ. ಅದನ್ನು ಅತಿಕ್ರಮಣ ಮಾಡಿಕೊಂಡಿದ್ದು ಮುಸ್ಲಿಂರು ಈಗ ದರ್ಗಾ ಮಾಡಿ ಉರುಸ್ ಮಾಡುತ್ತಿರೋದು ಇತ್ತಿಚೆಗೆ ನಾವು ನಮ್ಮ ಹಕ್ಕು ಇದೆ, ಶಿವರಾತ್ರಿ ದಿನ ಆ ಸ್ಥಳದಲ್ಲಿ ಸಾವಿರಾರು ಜನ ಅಲ್ಲ, ಲಕ್ಷಾಂತರ ಜನ ಬಂದು ಪೂಜೆ ಮಾಡುತ್ತೇವೆ. ನಮಗೆ ಪ್ರೊಟೆಕ್ಷನ್ ಕೊಡೋದು ಸರ್ಕಾರದ ಕೆಲಸ , ಸರ್ಕಾರ ತನ್ನ ಕರ್ತವ್ಯ ನಿರ್ವಹಿಸಲಿ ನಾವು ನಮ್ಮ ಕರ್ತವ್ಯ ನಿರ್ವಹಿಸುತ್ತೇವೆ ಎಂದಿದ್ದಾರೆ.