ಕಲಬುರಗಿ ಜಿಲ್ಲೆಗೆ ಕುಡಿಯುವ ನೀರಿನ ಯೋಜನೆಗಾಗಿ 227 ಕೋಟಿ ಮಂಜೂರು: ಸಚಿವ ಪ್ರಿಯಾಂಕ್ ಖರ್ಗೆ

0
14

ಕಲಬುರಗಿ: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲೆಯ ಒಟ್ಟು 72 ಜನವಸತಿ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿಯಲ್ಲಿ ಕುಡಿಯುವ ನೀರು ಒದಗಿಸಲು ಯೋಜನೆ ಜಾರಿಗೊಳಿಸಲು ಒಟ್ಟು 227 ಕೋಟಿ ರೂ.ಗಳನ್ನು ಸಚಿವ ಸಂಪುಟ ಸಭೆಯಲ್ಲಿ ಮಂಜೂರು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಲಬುರಗಿ ತಾಲೂಕಿನ 22 ಜನ ವಸತಿ ಪ್ರದೇಶಗಳಿಗೆ ಭೀಮಾ ನದಿಯಿಂದ ಕುಡಿಯುವ ನೀರು ಒದಗಿಸಲು ರೂ.85 ಕೋಟಿ, ಜೇವರ್ಗಿ ತಾಲೂಕಿನ 36 ಜನವಸತಿ ಪ್ರದೇಶಗಳಿಗೆ ಭೀಮಾ ನದಿಯಿಂದ ಕುಡಿಯುವ ನೀರು ಒದಗಿಸಲು ರೂ.106 ಕೋಟಿ ಹಾಗೂ ಆಳಂದ ತಾಲೂಕಿನ 14 ಜನವಸತಿ ಪ್ರದೇಶಗಳಿಗೆ ಅಮರ್ಜಾ ನದಿಯಿಂದ ಕುಡಿಯುವ ನೀರು ಒದಗಿಸಲು ರೂ. 36 ಕೋಟಿ ಮಂಜೂರು ಮಾಡಲಾಗಿದೆ.

Contact Your\'s Advertisement; 9902492681

” ಜನರಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅನುದಾನ ಮಂಜೂರು ಮಾಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಕುಡಿಯುವ ನೀರಿನ ಸಮಸ್ಯೆ ಇರುವ ಜನವಸತಿಗಳಿಗೆ ನೀರು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ” ಎಂದು ಸಚಿವರು ಹೇಳಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here