ರಾಷ್ಟ್ರವ್ಯಾಪಿ ಫೆಬ್ರವರಿ 16ರಂದು ರೈತ, ಕೂಲಿಕಾರ, ಕಾರ್ಮಿಕರ ಮುಷ್ಕರ

0
38

ಕಲಬುರಗಿ: ದೇಶಾದ್ಯಂತ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ರೈತ- ಕೂಲಿಕಾರ- ಕಾರ್ಮಿಕರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಅವರು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆ ಇಳಿಸುವಂತೆ, ದುಡಿಯುವ ಜನರ ಶೋಷಣೆ ತಪ್ಪಿಸಲು, ಕೊಂಡುಕೊಳ್ಳುವ ಸಾಮಥ್ರ್ಯ ಹೆಚ್ಚಿಸಲು, ಉದ್ಯೋಗ ಸೃಷ್ಟಿಸಲು ಆಗ್ರಹಿಸಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

Contact Your\'s Advertisement; 9902492681

ದೇಶದಲ್ಲಿ ಆರ್ಥಿಕ ಅಸಮಾನತೆ ಹೆಚ್ಚುತ್ತಿದೆ. ಬಡವರು ಇನ್ನೂ ಬಡವರಾಗುತ್ತಿದ್ದರೆ, ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ. ಅದಕ್ಕೆ ಕೇಂದ್ರ ಸರ್ಕಾರವು ಕಾರ್ಪೋರೇಟ್ ಪರ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಜನಸಾಮಾನ್ಯರು ಕಟ್ಟುವ ತೆರಿಗೆ ಮತ್ತು ಶ್ರಮದ ಗಳಿಕೆಯ 15.34 ಲಕ್ಷ ಕೋಟಿ ರೂ.ಗಳನ್ನು ದೇಶದ ಶ್ರೀಮಂತರ ಬ್ಯಾಂಕ್ ಸಾಲಗಳನ್ನು ಮನ್ನಾ ಮಾಡಲು ಬಳಕೆ ಮಾಡಲಾಗಿದೆ ಎಂದು ದೂರಿದರು.
ದೇಶದಲ್ಲಿ ಬಡತನ ರೇಖೆಗಿಂತ ಸುಮಾರು 80 ಕೋಟಿ ಜನರು ಇದ್ದಾರೆ.

ಕಳೆದ 2014 ಮೇಗೆ ಹೋಲಿಸಿದರೆ 2023ರಲ್ಲಿ ಎಲ್ಲ ಅಗತ್ಯ ವಸ್ತುಗಳ ಬೆಲೆಗಳು ಶೇಕಡಾ 30ರಷ್ಟು ಹೆಚ್ಚಾಗಿದೆ. ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾದರೂ ಕೂಡ ಇಂಧನ ಉತ್ಪಾದನೆ, ವಿತರಣೆ ಖಾಸಗಿ ಕಂಪೆನಿಗಳ ಪಾಲಾಗಿರುವ ಫಲವಾಗಿ ಇಂಧನದ ಮೇಲೆ ವಿಪರೀತ ತೆರಿಗೆ ವಿಧಿಸಿದ್ದರ ಪರಿಣಾಮ ಡೀಸೆಲ್, ಪೆಟ್ರೋಲ್ ಬೆಲೆಗಳು ಹೆಚ್ಚಳವಾಗಿ ಅಗತ್ಯ ವಸ್ತುಗಳ ಬೆಲೆಏರಿಕೆಗೂ ಕಾರಣವಾಗಿವೆ ಎಂದು ಅವರು ದೂರಿದರು.

ಇಂದಿನ ಆರ್ಥಿಕ ನೀತಿಗಳು ಉದ್ಯೋಗ ರಹಿತವಾಗಿ ಜಾರಿಯಾಗುತ್ತಿವೆ. ಉತ್ಪಾದನಾ ವಲಯದಲ್ಲಿ ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಆಗುತ್ತಿಲ್ಲ. ಗುತ್ತಿಗೆ, ಹೊರಗುತ್ತಿಗೆ, ತಾತ್ಕಾಲಿಕ ಉದ್ಯೋಗಗಳು ಹೆಚ್ಚುತ್ತಿವೆ. ಬಂಡವಾಳಶಾಹಿಗಳ ಪರವಾಗಿ ಕಾರ್ಮಿಕ ಕಾನೂನುಗಳನ್ನು ಬದಲಿಸಿ ಸಂಹಿತೆಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ಅವರು ಆರೋಪಿಸಿದರು.

ದೇಶದಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪದವೀಧರರ ನಿರುದ್ಯೋಗಿಗಳ ಸಂಖ್ಯೆ ಶೇಕಡಾ 42.3ರಷ್ಟಿದೆ. ಗ್ರಾಮೀಣ ಪ್ರದೇಶದಲ್ಲಿ ಕೃಷಿ ಬಿಕ್ಕಟ್ಟು ಉದ್ಭವಿಸಿದೆ. ರಾಷ್ಟ್ರೀಯ ಸಂಪತ್ತು ಲೂಟಿ ಮಾಡುವ ರಾಷ್ಟ್ರ ವಿರೋಧಿ ನಡೆಯನ್ನು ನಿಲ್ಲಿಸಬೇಕಾಗಿರುವುದು ಅಗತ್ಯವಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ, ಒಂದು ರಾಷ್ಟ್ರ- ಒಂದು ಧರ್ಮ, ಒಂದೇ ಸಂಸ್ಕøತಿ ಎಂದು ಪ್ರತಿಪಾದಿಸುವ ಕೇಂದ್ರ ಸರ್ಕಾರ ಬಹುತ್ವ ಭಾರತದ ಕಲ್ಪನೆಗೆ ಮತ್ತು ಒಕ್ಕೂಟ ವ್ಯವಸ್ಥೆಯ ತತ್ವಕ್ಕೆ ವಿರುದ್ಧವಾಗಿದೆ. ಅದರ ಭಾಗವಾಗಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಕಾರ್ಪೋರೇಟ್- ಕೋಮುವಾದಿ ಅಕ್ರಮ ಮೈತ್ರಿಕೂಟವನ್ನು ನಿರ್ಣಾಯಕವಾಗಿ ಸೋಲಿಸಬೇಕಿದೆ ಎಂದು ಅವರು ಹೇಳಿದರು.

ಸಂವಿಧಾನದ ಆಶಯಗಳ ಪರವಾಗಿ ನಡೆಯುತ್ತಿರುವ ದೇಶಪ್ರೇಮಿ ಹೋರಾಟದಲ್ಲಿ ಕಾರ್ಮಿಕರು, ರೈತರು, ಕೃಷಿ, ಕೂಲಿಆರರು ಮತ್ತು ಇತರೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಶ್ರೀಮತಿ ಗೌರಮ್ಮ ಪಾಟೀಲ್, ಎಂ.ಬಿ. ಸಜ್ಜನ್, ಭೀಮಶೆಟ್ಟಿ ಯಂಪಳ್ಳಿ, ಮೇಘರಾಜ್ ಕಠಾರೆ, ನಾಗಯ್ಯಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here