ಕಲಬುರಗಿ; ಎರಡು ವರ್ಷದ ಹೆಣ್ಣು ಮಗುವಿಗೆ ನೇಣು ಹಾಕಿಕೊಂದು ನಂತರ ತಾನೂ ನೇಣು ಹಾಕಿಕೊಂಡು ಆತ್ಮಹತ್ತೆ ಮಾಡಿಕೊಂಡಿರುವಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ತಾಯಿ ಶಿವಲೀಲಾ ಆನಂದ(24) ಹಾಗೂ ಮಗಳು ವರ್ಷಿತಾ(2) ಮೃತಪಟ್ಟವರು. ಫೆ. 13ರ ಮಂಗಳವಾರ ಸಂಜೆ ಸುಮಾರು 5 ಗಂಟೆಗೆ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯ ತಾಯಿ ಮೊದಲು ಮಗಳಿಗೆ ನೇಣು ಹಾಕಿ ಬಳಿಕ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತಪಟ್ಟ ತಾಯಿ ಮತ್ತು ಮಗಳ ಶವ ಚಿಂಚೋಳಿ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಚಿಂಚೋಳಿ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಂಡ ಆನಂದ ಎಂಬವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.