ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತರಿಂದ ದೂರು ಸ್ವೀಕಾರ

0
25

ಸುರಪುರ: ಕಚೇರಿಯಲ್ಲಿನ ಯಾವುದೇ ಅಧಿಕಾರಿಗಳು ಸಿಬ್ಬಂದಿಗಳು ಜನರು ನಿಮ್ ಕಚೇರಿಗಳಿಗೆ ತಮ್ಮ ಕೆಲಸಕ್ಕೆಂದು ಆಗಮಿಸಿದಾಗ ನೀವೆ ಅವರನ್ನು ಮಾತನಾಡಿಸಿ ಅವರ ಕೆಲಸವನ್ನು ಮಾಡಿ ಕೊಡುವಂತೆ ಕರ್ನಾಟಕ ಲೋಕಾಯುಕ್ತ ಅಧೀಕ್ಷಕ ಆಂಟನಿ ಜಾನ್ ಜೆ.ಕೆ ತಿಳಿಸಿದರು.

ನಗರದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು,ಯಾವುದೇ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಾವು ಮೊದಲು ಮನುಷ್ಯರು,ಮಾನವೀಯತೆ ಇದೆ ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು,ಸಾರ್ವಜನಿಕರಿಗೆ ಸರಿಯಾದ ಸಮಯದಲ್ಲಿ ಕೆಲಸ ಮಾಡಿ ಕೊಟ್ಟರೆ ಅವರು ನಿಮ್ಮನ್ನು ನೆನಪಿಟ್ಟುಕೊಳ್ಳುತ್ತಾರೆ,ಸಾರ್ವಜನಿಕರಿಂದ ಯಾವುದೇ ರೀತಿಯ ನಿರೀಕ್ಷೆ ಇಟ್ಟುಕೊಳ್ಳದೆ ಅವರ ಕೆಲಸ ಮಾಡಿಕೊಡುವ ಮೂಲಕ ನಿಮ್ಮ ಮೇಲೆ ಜನರಿಗೆ ಧನ್ಯತಾ ಭಾವನೆ ಮೂಡುವಂತೆ ಕೆಲಸ ಮಾಡಿ ಎಂದು ಕಿವಿ ಮಾತು ಹೇಳಿದರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜನರು ತಮ್ಮ ಅಹವಾಲು ಸಲ್ಲಿಸಿದರು,ಒಟ್ಟು 18 ಅರ್ಜಿಗಳು ಸಲ್ಲಿಕೆಯಾದವು. ಈ ಸಂದರ್ಭದಲ್ಲಿ ಬಹುತೇಕ ಅರ್ಜಿಗಳು ಹಿರಿಯ ನಾಗರಿಕರ ಮಾಶಾಸನ,ಭೂ ಸರ್ವೇ,ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿಗೆ ಕ್ರಮ ಕೈಗೊಳ್ಳಲು ವಿಳಂಬ ಕುರಿತಾದ ಅಹವಾಲು ಸಲ್ಲಿಕೆಯಾದವು,ಶೇ 90 ರಷ್ಟು ಅಹವಾಲುಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಕರೆಯಿಸಿ ಸ್ಥಳದಲ್ಲಿಯೇ ಇತ್ಯರ್ಥಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ಯಾದಗಿರಿ ಡಿ.ಎಸ್.ಪಿ.ಹಣಮಂತ್ರಾಯ,ಲೋಕಾಯುಕ್ತ ಪಿ.ಐ ಹಣಮಂತ ಸಣ್ಣಮನಿ,ತಹಸಿಲ್ದಾರ್ ಕೆ.ವಿಜಯಕುಮಾರ,ಸುರಪುರ ಠಾಣೆ ಪಿ.ಐ ಆನಂದ ವಾಘಮೊಡೆ ಇದ್ದರು.

ಕಕ್ಕೇರಾ ಬೃಂದಾ ಗ್ಯಾಸ್ ಏಜೆನ್ಸಿ ವಿರುದ್ಧ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆ ಮುಖಂಡರು ಸಲ್ಲಿಸಿದ್ದ ಮನವಿಗೆ ಯಾವುದೇ ಕ್ರಮ ಕೈಗೊಳ್ಳದಿರುವ ಕುರಿತು ಸಂಘಟನೆ ಮುಖಂಡರು ಲೋಕಾಯುಕ್ತ ಅಧಿಕಾರಿಗಳ ಗಮನಕ್ಕೆ ತಂದಾಗ,ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿ,ಶೀಘ್ರದಲ್ಲಿಯೇ ಮನವಿಯ ಕುರಿತು ಕ್ರಮ ಕೈಗೊಳ್ಳುವುದಾಗಿ ಸಂಘಟನೆ ಜಿಲ್ಲಾ ಉಪ ಪ್ರಧಾನ ಸಂಚಾಲಕ ಮಾಳಪ್ಪ ಕಿರದಳ್ಳಿ,ತಾಲೂಕು ಸಂಚಾಲಕ ಶರಣಪ್ಪ ತಳವಾರಗೇರಗೆ ಭರವಸೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here