ಎರಡು ದಿನಗಳ ವಿಶ್ವಾಸ್ ಆಂದೋಲನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

0
69

ಕಮಲಪುರ; ತಾಲ್ಲೂಕ ಪ್ರಾಥಮಿಕ ಆರೋಗ್ಯ ಕೇಂದ್ರ ಔರದ (ಬಿ) ಸಭಾಂಗಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾಳಗಿ ತಾಲೂಕು ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಹೋಗದಲ್ಲಿ ವಿಶ್ವಾಸ್ ಆಂದೋಲನ ಎರಡು ದಿನದ ತರಬೇತಿ ಕಾರ್ಯಕ್ರಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಅವರಾದ ಬಿ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ ಸುರೇಶ ಕಗ್ಗನಮಡಿ ಅವರು ಸಸಿಗೆ ನೀರು ಏರಿಯುವ ಮೂಲಕ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ವಿ ಎಚ್ ಎಸ್ ಏನ್ ಸಿ ಮತ್ತು ವಿಶ್ವಾಸ ಆಂದೋಲನ ಉದ್ದೇಶ ಕುರಿತು ತರಬೇತಿಯನ್ನು ಹಿರಿಯ ಪ್ರಾಥಮಿಕ ಸುರಕ್ಷಣಾಧಿಕಾರಿ  ಪುಂಡಲೀಕ ಗಂಜಿ , ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ  ಶರಣಮ್ಮಾ ಹಾಗೂ ತಾಲೂಕು ಆಶಾ ಮೇಲ್ವಿಚಾರಕಿ  ಕವಿತಾ ರಾಣಿ, ತಾಲೂಕಾ  ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ಆಡಳಿತ ವೈದ್ಯಾಧಿಕಾರಿಗಳಾದ  ಡಾ. ಶಿಲ್ಪಾ ಗೋಳೆ, ಪ್ರಾಥಮಿಕ ಆರೋಗ್ಯ ಕೇಂದ್ರದ  ಆರೋಗ್ಯ ನಿರೀಕ್ಷಿಣಾಧಿಕಾರಿ ಮಹೇಂದ್ರ, ರಾಘವೇಂದ್ರ, ಹಾಗೂ ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿ ಆರೋಗ್ಯ ಸುರಕ್ಷಣಾಧಿಕಾರಿ, ಆರೋಗ್ಯ ನಿರೀಕ್ಷಿಣಾಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರು, ಸದಸ್ಯರು ನಾಗೇಂದ್ರ ,ಪೀರಪ್ಪ, ಶರಣಪ್ಪ ಹಾಗೂ ಇತರರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here