ಕಲಬುರಗಿ: ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಅಳವಡಿಸಬೇಕೆಂಬ ಸರ್ಕಾರದ ನಿರ್ದೇಶನ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಮಾಡಿ ಅಳವಡಿಸಲಾಯಿತು.
ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಅವರು ಮಹಾನ್ ಮಾನವಾತಾವಾದಿ ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಜಗದೇವಪ್ಪ ಬಿ., ಮುಖ್ಯ ಯೋಜನಾಧಿಕಾರಿ ಎಸ್.ಎಸ್. ಮಠಪತಿ, ಮುಖ್ಯ ಲೆಕ್ಕಾಧಿಕಾರಿ ಸಂತೋಷ, ಲೆಕ್ಕಾಧಿಕಾರಿ ಸುನೀತಾ ಕಟಕೆ ಸೇರಿದಂತೆ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.