ಶಿಸ್ತುಬದ್ದ ಅಧ್ಯಯನ, ನಿರಂತರ ಪ್ರಯತ್ನದಿಂದ ಉನ್ನತ ಸಾಧನೆ

0
77

ಕಲಬುರಗಿ: ವಿದ್ಯಾರ್ಥಿಗಳು ನಿಗದಿತ ಗುರಿಯನ್ನಿಟ್ಟುಕೊಂಡು ಅದಕ್ಕೆ ಪೂರಕವಾಗಿ ಶಿಸ್ತು, ಸಮಯ ಪ್ರಜ್ಞೆ, ದೃಢ ಸಂಕಲ್ಪ, ನಿರಂತರ ಅಧ್ಯಯನ. ಧನಾತ್ಮಕ ಚಿಂತನೆಯೊಂದಿಗೆ ನಿರಂತರವಾಗಿ ಪ್ರಯತ್ನಿಸಿದರೆ, ನೀವು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ ಹೇಳಿದರು.

ಜೇವರ್ಗಿ ಪಟ್ಟಣದ ಶ್ರೀ ಸಾಯಿ ಮಿನಿ ಕಲ್ಯಾಣ ಮಂಟಪದಲ್ಲಿ ಶನಿವಾರ ಜರುಗಿದ ‘ನರೇಂದ್ರ ಪದವಿ ಪೂರ್ವ ಕಾಲೇಜ್’ನ ವಾರ್ಷಿಕೋತ್ಸವ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ತಮಗೆ ನಿಗದಿಪಡಿಸಿರುವ ಪಠ್ಯಕೇವಲ ಪರೀಕ್ಷೆಗೆ ಮಾತ್ರ ಸೀಮಿತವಲ್ಲ. ಅದರಲ್ಲಿ ನೀವು ಬದುಕನ್ನು ಕಟ್ಟಿಕೊಳ್ಳುವ ಮಾರ್ಗವಿದೆ. ಅದನ್ನು ಹುಡುಕುವ ಕೆಲಸ ಮಾಡಬೇಕು. ಒಂದು ವೇಳೆ ಶೈಕ್ಷಣಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ತೊಂದರೆಯಿಲ್ಲ. ಆದರೆ ಜೀವನದ ಪರೀಕ್ಷೆಯಲ್ಲಿ ಫೇಲಾದರೆ ಜೀವನ ವ್ಯರ್ಥವಾಗುತ್ತದೆ. ಮೌಢ್ಯತೆ, ಕಂದಾಚಾರದಿಂದ ಹೊರಬನ್ನಿ. ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಿ. ಶಕ್ತಿಶಾಲಿಗಳಾಗಿ, ನಿರಂತರ ಅಧ್ಯಯನದಿಂದ ಉತ್ತಮ ಫಲಿತಾಂಶ ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕದಂಬ ಪಿಯು ಕಾಲೇಜಿನ ಪ್ರಾಚಾರ್ಯ ಶ್ರೀಶೈಲ ಖಣದಾಳ ಮಾತನಾಡಿ, ಯಾವ ವ್ಯಕ್ತಿ ಜೀವನದಲ್ಲಿ ದೃಢ ಸಂಕಲ ಮತ್ತು ನಿರಂತರ ಪ್ರಯತ್ನ ಮಾಡುತ್ತಾನೆಯೋ, ಆತ ಜೀವನದಲ್ಲಿ ಅಂದುಕೊಂಡಿದ್ದು ಸಾಧಿಸಲು ಸಾಧ್ಯ. ಅಸಾಧ್ಯ ಎಂಬುದು ಇಲ್ಲವೇ ಇಲ್ಲ. ಪ್ರಯತ್ನದಿಂದ ಎಲ್ಲವೂ ಸಾಧ್ಯ ಎಂದು ಮಾರ್ಮಿಕವಾಗು ನುಡಿದರು.

ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿ ಪುರಸ್ಕøತ ಎಚ್.ಬಿ.ಪಾಟೀಲ ಅವರಿಗೆ ವಿಶೇಷವಾಗಿ ಸತ್ಕರಿಸಲಾಯಿತು. ಕಳೆದ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ದೇವೇಂದ್ರ ಗುಡೂರ್, ಉಪನ್ಯಾಸಕರಾದ ರಾಯಣ್ಣ ಕಟ್ಟಿಮನಿ, ಕಲ್ಪನಾ ರೆಡ್ಡಿ, ನಬಿ ಪಟೇಲ್, ಶಿವಾನಂದ ಸಿಂಪಿ, ವೀರೇಶ ಗೋಗಿ, ದ್ಯಾವಣ್ಣ ಎಸ್.ಹಳ್ಳಿ, ಬಸವರಾಜ ಸೊನ್ನ, ಶಾಂತಕುಮಾರ ಟಿ.ಕುರ್ಡೇಕರ್, ಶಿವಾನಂದ ಬಡಗೇರ, ಮಲ್ಲಿಕಾರ್ಜುನ ಬಾಸ್ಕಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here