ಸಂವಿಧಾನದ ತಳಹದಿಗೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

0
12

ಬೆಂಗಳೂರು; ಜನರಿಗೆ ಸಂವಿಧಾನದ ಅರಿವು ಮೂಡಿಸುವ ಉದ್ದೇಶ, ಸಂವಿಧಾನ ಅರಿವು ಮೂಡಿಸುವಲ್ಲಿ ಬದ್ಧತೆ ಹಾಗೂ ಸ್ಪಷ್ಟತೆ ಇರಬೇಕು. ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವತತ್ವಗಳೇ ಸಂವಿಧಾನದ ತಳಹದಿ. ಇದÀಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದುಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಭಾರತ ಸಂವಿಧಾನ ಹಾಗೂ ರಾಷ್ಟ್ರೀಯ ಐಕ್ಯತಾಸಮಾವೇಶಕ್ಕೆ ಸಂಬಂಧಿಸಿದಂತೆ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನ ಜಾರಿಗೆ ಬಂದು 75 ನೇ ವರ್ಷಕ್ಕೆ ಕಾಲಿಟ್ಟಿದೆ. 75 ನೇ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಕರ್ನಾಟಕದಾದ್ಯಂತ 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಜನವರಿ 26 ರಿಂದ ಫೆ. 23ರವರೆಗೆ ಹಮ್ಮಿಕೊಳ್ಳಲಾಗಿದೆ. ಫೆ. 24-25 ಎರಡು ದಿಗಳುರಾಷ್ಟ್ರೀಯ ಏಕತಾ ಸಮಾವೇಶ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

Contact Your\'s Advertisement; 9902492681

ಹೆಸರಾಂತ ಭಾಷಣಕಾರರು,ಖ್ಯಾತ ಚಿಂತಕರಾದ ಪೆÇ್ರ: ಅಸುತೋಶ್ ವರ್ಶನಿ ಹಾಗೂ ಡಾ: ಗಣೇಶ್ ದೇವಿ, ಪೆÇ್ರ. ಜಯಂತಿ ಘೋμï, ಪೆÇ್ರ. ಸುಖದೇವ್ ಥೋರಟ್, ಪೆÇ್ರ, ಕಾಂಚಾ, ಪ್ರಶಾಂತ್ಭೂಷಣ್, ಬಿಜುವಾಡ ವಿಲ್ಸನ್, ಮೇಧಾ ಪಾಟ್ಕರ್ ಮುಂತಾದ ಅನೇಕ ಚಿಂತಕರು ಮೇಧಾವಿಗಳು ಈ ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದಾರೆ. ದೇಶದಸಮಸ್ಯೆಗಳು, ಜನರ ಬವಣೆಗಳು,ಸಂವಿಧಾನದಲ್ಲಿ ಅದಕ್ಕೆ ಪರಿಹಾರಗಳ ಬಗ್ಗೆ ಬೆಳಕು ಚೆಲ್ಲಲಿದ್ದಾರೆ.

24 ರಂದುಉದ್ಘಾಟನೆ ನಡೆದು25 ರಂದು ಬೃಹತ್ ರ್ಯಾಲಿ ನಡೆಯಲಿದೆ. ಜಾಥಾ ಯಶಸ್ವಿಯಾಗಿ ನಡೆಯುತ್ತಿದೆ.ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿಸಲಾಗುತ್ತಿದೆ. ಸಂವಿಧಾನ ರಚನೆಯಾದ ನಂತರ ಮೊದಲನೇ ಬಾರಿಗೆ ಬಜೆಟ್ ಪುಸ್ತಕದ ಮುಖಪುಟದಲ್ಲಿ ಪೀಠಿಕೆಯನ್ನು ಮುದ್ರಿಸಲಾಗಿದೆ ಎಂದು ತಿಳಿಸಿದರು.

ದೇಶದ ಜನರಿಗೆ ಸಂವಿಧಾನ ನಮಗೇನು ಕೊಟ್ಟಿದೆ ಎನ್ನುವುದನ್ನು ತಿಳಿಯಬೇಕು. ಪ್ರತಿಯೊಬ್ಬ ನಾಗರಿಕನಿಗೂ ಇದು ಅರ್ಥವಾಗದಿದ್ದರೆ, ಅªರÀ ಹಕ್ಕುಗಳ ಪರವಾಗಿ ಹೋರಾಟ ಮಾಡಲು ತಿಳಿಯಬೇಕು. ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಹೋರಾಟಎಂಬ ಮಂತ್ರಗಳನ್ನು ನೀಡಿದ್ದಾರೆ. ಹೋರಾಟ ಇಲ್ಲದೇ ಸಂವಿಧಾನದಲ್ಲಿಹೇಳಿರುವ ಅನೇಕ ಹಕ್ಕುಗಳು ನಮಗೆ ದಕ್ಕುತ್ತಿರಲಿಲ್ಲ. ಸ್ವಾತಂತ್ರ್ಯ ಬಂದು 77 ವರ್ಷಗಳಾಯಿತು.ಸಂವಿಧಾನ ಜಾರಿಯಾಗಿ 75 ನೇ ವರ್ಷವಾದರೂ ಎಲ್ಲರಿಗೂ ಎಲ್ಲ ಹಕ್ಕುಗಳು ಸಿಕ್ಕಿಲ್ಲ. ಸಂವಿಧಾನ ಜಾರಿ ಬಂದ ಸಂದರ್ಭದಲ್ಲಿ ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಅಂಬೇಡ್ಕರ್ ಹೇಳಿದ್ದರು. ದೇಶದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಅಸಮಾನತೆ ಇದೆ. ಇಷ್ಟು ವರ್ಷಗಳಾದರೂ ಅಸಮಾನತೆ ನಮ್ಮ ದೇಶದಿಂದ ಹೋಗಿಲ್ಲ. ಈ ಬಗ್ಗೆ ಎಲ್ಲರೂ ಎಚ್ಚೆತ್ತುಕೊಳ್ಳಬೇಕು. ಆರ್ಥಿಕ, ಸಾಮಾಜಿಕ, ಸಮಾನತೆಯನ್ನುಸಂವಿಧಾನ ಕೊಟ್ಟಿದ್ದರೂ ನಮಗ್ಯಾಕೆ ಸಿಕ್ಕಿಲ್ಲ ಎಂಬ ಜಾಗೃತಿ ಮೂಡಿಸಲು ಈ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.

ನಮ್ಮ ದೇಶದಲ್ಲಿ ಕಾನೂನಿನ ಅರಿವು ಕಡಿಮೆಯಿದೆ. ಬಹಳ ಜನರು ಸಂವಿಧಾನದ ಬಗ್ಗೆ ತಿಳಿದಿಲ್ಲ. ದೇಶದ ಪ್ರತಿ ನಾಗರಿಕನಿಗೂ ನಮ್ಮ ಸಂವಿಧಾನದ ಬಗ್ಗೆ ತಿಳಿದಿರಬೇಕು.ಸಂವಿಧಾನ ನೀಡಿರುವ ಹಕ್ಕುಗಳು, ಅವುಗಳು ಸರಿಯಾಗಿ ಅನುμÁ್ಠನ ಮಾಡಲಾಗುತ್ತಿದೆಯೇ ಎಂದು ಎಲ್ಲರಿಗೂ ತಿಳಿಯುವ ಸಲುವಾಗಿ ಸಮಾವೇಶವನ್ನು ಆಯೋಜಿಸುತ್ತಿರುವುದಾಗಿ ತಿಳಿಸಬೇಕಿದೆ. ಸಂವಿಧಾನದಲ್ಲಿ ಕೆಲವರಿಗೆ ನಂಬಿಕೆ, ಗೌರವವಿಲ್ಲ. ಆದ್ದರಿಂದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಬೇಕಾದ್ದು ಸರ್ಕಾರಗಳ ಕರ್ತವ್ಯ. ಸಹಿಷ್ಣುತೆ ಮತ್ತು ಸಹಬಾಳ್ವೆಯನ್ನು ಸಂವಿಧಾನ ತಿಳಿಸುತ್ತದೆ, ಆದರೆ ಅದು ಪಾಲನೆಯಾಗುತ್ತಿದೆಯೇ?ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ನಿಜವಾಗಲೂ ಆಗುತ್ತಿದೆಯೇ? ಸಾಮಾಜಿಕ ನ್ಯಾಯ ಮತ್ತು ಅವಾಕಶಗಳನ್ನು ಪಡೆಯಲು ಜನರು ಪ್ರಯತ್ನಿಸಲು ಜಾಗೃತಿ ಮೂಡಿಸಲು ಫೆಬ್ರವರಿ 24 ಮತ್ತು 25 ರಂದು ಎರಡು ಭಾರತ ಸಂವಿಧನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು.

ಸಂವಿಧಾನ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿ ಬದ್ಧತೆ ಹಾಗೂ ಸ್ಪಷ್ಟತೆ ಇದ್ದರೆ, ಯಾರು ನಮ್ಮನ್ನು ದಾರಿತಪ್ಪಿಸಲು ಸಾಧ್ಯವಿಲ್ಲ. ಸುಮಾರು 78% ರಷ್ಟು ಜನರು ಶಿಕ್ಷಣ ಪಡೆದಿದ್ದಾರೆ. ವಿದ್ಯಾವಂತರು ಇಂದಿಗೂ ಮೌಢ್ಯ ಕಂದಾಚಾರವನ್ನು ನಂಬುತ್ತಿದ್ದಾರೆ. ನಮ್ಮಲ್ಲಿ ವೈಚಾರಿಕತೆಯ ಬಗ್ಗೆ ಜ್ಞಾನವಿಲ್ಲ.ಸರಿತಪ್ಪುಗಳ ಬಗ್ಗೆ ಅರಿಯಲೆಂದೇ ಶಿಕ್ಷಣ ಪಡೆಯುವುದು ಎಂದರು.

ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಅವರು ಮಾತನಾಡಿ, ಈ ರಾಷ್ಟ್ರೀಯ ಸಮಾವೇಶದಲ್ಲಿ ಭಾಷಣಕಾರರೊಂದಿಗೆ ಆನ್‍ಲೈನ್ ಭಾಗವಹಿಸುವಿಕೆ ಮತ್ತು ಸಂವಾದಕ್ಕೂ ಅವಕಾಶ ಕಲ್ಪಿಸಲಾಗಿದ್ದು, ಪ್ರತಿಯೊಬ್ಬರಿಗೂ ಭಾರತದ ಸಾಂವಿಧಾನಿಕ ಭರವಸೆಯನ್ನು ಬಲಪಡಿಸಲು ನಿರಂತರವಾಗಿ ನಾವು ಕೆಲಸ ಮಾಡುತ್ತಿರುವ ಕುರಿತು ನಮ್ಮ ಜನರಿಗೆ ವಾಸ್ತವದ ಅರಿವನ್ನು ಈ ಕಾರ್ಯಕ್ರಮವು ನೀಡುತ್ತದೆ. ಪ್ರತಿಯೊಬ್ಬ ಭಾರತೀಯರು ಪರಸ್ಪರ ಸಹೋದರ ಸಹೋದರಿಯರಂತೆ ನಡೆದುಕೊಳ್ಳಬೇಕು ಮತ್ತು ಒಟ್ಟಾಗಿ ಕೆಲಸ ಮಾಡುವುದರೊಂದಿಗೆ ಸಮಾಜದಲ್ಲಿ ಘನತೆಯಿಂದ ಬದುಕಬೇಕು ಎಂದು ನಾವು ಬಯಸುತ್ತೇವೆ ಎಂದು ಹೇಳಿದರು.

ಸಂವಿಧಾನಕ್ಕೆ 75ನೇ ವರ್ಷವಾಗಿರುವÀ ಹಿನ್ನೆಲೆಯಲ್ಲಿ, ಈ ಸಮಾವೇಶವು ಸಂವಿಧಾನ, ಕಲ್ಯಾಣ ಮತ್ತು ಅಭಿವೃದ್ಧಿ, ಕರ್ನಾಟಕದಲ್ಲಿ ಅಭಿವೃದ್ಧಿ ಮಾದರಿಗಳು ಹಾಗೂ ಪ್ರಜಾಪ್ರಭುತ್ವ ಮತ್ತು ಅಂತರ್ಗತ ಕರ್ನಾಟಕ ಎಂಬ ನಾಲ್ಕು ಸಮಗ್ರವಾದ ವಿಷಯಗಳನ್ನು ಪ್ರತಿಬಿಂಬಿಸುತ್ತದೆ ಎಂದು ಸಚಿವರು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರಾಕೇಶ್ ಕುಮಾರ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here