ಬೆಂಗಳೂರು; ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸಭೆಯ ಕಲಾಪದ ವೇಳೆ ಮಾನ್ಯ ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯ ಮಾಡುತ್ತಾ ವಿವರಣೆ ನೀಡಿದರು.
ಪತ್ರಿಕೆಗಳ ಶ್ಲಾಘನೆಗಳನ್ನು ಪ್ರಸ್ತಾಪಿಸಿದ ಸಿಎಂ; ರಾಜ್ಯಪಾಲರ ಭಾಷಣ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಕೂಲ ಕುರಿತಂತೆ ರಾಜ್ಯ ಮಟ್ಟದ ಕನ್ನಡ ಮತ್ತು ಇಂಗ್ಲಿμï ಪತ್ರಿಕೆಗಳು ಹಾಗೂ ಇತರೆ ಮಾಧ್ಯಮಗಳು ಶ್ಲಾಘಿಸಿ ಬರೆದಿರುವುದನ್ನು ಮತ್ತು ಮೆಚ್ಚುಗೆ ಸೂಚಿಸಿರುವುದನ್ನು ಪ್ರಸ್ತಾಪಿಸಿದರು. ಬಳಿಕ ವಿರೋಧ ಪಕ್ಷಗಳು ನಾಡಿನ ಪತ್ರಿಕೆಗಳ ಅಭಿಪ್ರಾಯ ಮತ್ತು ವಿಶ್ಲೇಷಣೆಗಳನ್ನಾದರೂ ಓದುವುದನ್ನು ರೂಢಿಸಿಕೊಳ್ಳಬೇಕು, ಏನನ್ನೂ ತಿಳಿದುಕೊಳ್ಳದೆ ಸುಳ್ಳುಗಳನ್ನು ಹೇಳಬಾರದು ಎಂದರು.
ಸರ್ಕಾರದ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಹಾಗೂ ಜನಪರ ಯೋಜನೆಗಳಿಗೆ ರಾಜ್ಯಪಾಲರು ಕನ್ನಡಿ ಹಿಡಿದಿದ್ದಾರೆ. ಆದರೆ ಪ್ರತಿಪಕ್ಷ ನಾಯಕರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಆರೋಪ ಮಾಡಿದ್ದಾರೆ.
ಬಂಡವಾಳ ಹೂಡಿಕೆಗೂ, ಕಾನೂನು ಸುವ್ಯವಸ್ಥೆಗೂ ನೇರಾ ನೇರ ಸಂಬಂಧ ಇರುತ್ತದೆ. ಸರ್ಕಾರ ಕಡಿಮೆ ಅವಧಿಯಲ್ಲೇ ಇμÉ್ಟೂಂದು ಪ್ರಮಾಣದ ಹೂಡಿಕೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಆಗಿದೆ ಎಂದು ವಿವರಿಸಿದರು.
ಪ್ರತಿ ಪಕ್ಷದವರ ಸುಳ್ಳು ಆರೋಪಗಳಿಗೆ ಈಗಾಗಲೇ ಗೃಹ ಸಚಿವ ಪರಮೇಶ್ವರ್ ಅವರು ಸ್ಪಷ್ಟ ಉತ್ತರ ನೀಡಿದ್ದಾರೆ ಎಂದು ತಿಳಿಸಿದರು.
ಹಿಂದಿನ ಸರ್ಕಾರ, ಅಭಿವೃದ್ಧಿ ಕಾರ್ಯಗಳನ್ನು ಮರೆತು ಸುಳ್ಳುಗಳ ಆಸರೆಗೆ ಹೋದ ಕಾರಣ ಹಿಂದಿನ ಸರ್ಕಾರವನ್ನು ರಾಜ್ಯದ ಜನತೆ ತಿರಸ್ಕರಿಸಿದರು. ಇದು ಅವರ ಕಾರ್ಯಗಳಿಗೆ ರಾಜ್ಯದ ಜನತೆ ಕೊಟ್ಟಿರುವ ಸರ್ಟಿಫಿಕೇಟ್ ಎಂದರು.
ನಾವು 2013 ರಲ್ಲಿ 2023 ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ ಎಂದರು.