ನಗರೋತ್ಥಾನ ಯೋಜನೆಯಲ್ಲಿ ಅವೈಜ್ಞಾನಿಕ ಕಾಮಗಾರಿ ಹಸಿರು ಸೇನೆ ಹಾಗೂ ಹಲವು ಸಂಘಟನೆಗಳಿಂದ ಪ್ರತಿಭಟನೆ

0
42

ಕೆಂಭಾವಿ: ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದಿರುವ ಸಿ ಸಿ ರಸ್ತೆ, ರಸ್ತೆ ಅಗಲಿಕರಣ, ಒಳಚರಂಡಿ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಕಾಮಗಾರಿ ಕೂಡಲೆ ಬಂದ್ ಮಾಡಿ ತಪ್ಪಿತಸ್ಥ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೇರಿದಂತೆ ದಲಿತಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು 2016-17ನೇ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕತೆಯಿಂದ ಕೂಡಿದೆ. ಅಲ್ಲದೆ ರಸ್ತೆ ಅಗಲಿಕರಣದಲ್ಲಿ ತಾರತಮ್ಯವೆಸಗಿ ಅಧಿಕಾರಿಗಳು ಬಡವರ ಆಸ್ತಿ ಹಾನಿ ಮಾಡಿದ್ದಾರೆ, ಯೋಜನೆ ಪ್ರಕಾರ ಕಾಮಗಾರಿ ನಿರ್ವಹಿಸದೆ ಗುತ್ತಿಗೆದಾರರೊಂದಿಗೆ ಅಧಿಕಾರಿಗಳು ಶಾಮಿಲಾಗಿ ಯದ್ವಾತದ್ವಾ ಮಾಡಿ ಪಟ್ಟಣ ಸೌಂದರ್ಯ ಹಾಳುಮಾಡುತ್ತಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ಜನಪ್ರತಿನಿಧಿಗಳು ಕೂಡಾ ನಿಷ್ಕಾಳಜಿ ತೋರುತ್ತಿದ್ದಾರೆ. ಸರಕಾರದ ಹಣ ಹಗಲು ದರೋಡೆಯಾಗುತ್ತಿದೆ. ಈ ಅವ್ಯವಹಾರದಲ್ಲಿ ಶಾಮೀಲಾದ ಅಧಿಕಾರಿಗಳನ್ನು ಅಮಾನತ್ತುಗೊಳಿಸಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಒಕ್ಕೂರಿಲಿನಿಂದ ಆಗ್ರಹಿಸಿದರು.

Contact Your\'s Advertisement; 9902492681

ನಂತರ ಪ್ರತಿಭಟನಾ ಸ್ಥಳ ಪಟ್ಟಣದ ಬಸವೇಶ್ವರ ವೃತ್ತಕ್ಕೆ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಬಂದು ಪ್ರತಿಭಟನಾಕಾರರ ಅಹವಾಲನ್ನು ಸ್ವೀಕರಿಸಿ ಕಾಮಗಾರಿಯಲ್ಲಿ ನಡೆದಿರುವ ಅಕ್ರಮ ಕುರಿತು ಪರಿಶೀಲನೆ ನಡೆಸಲಾಗುವುದು, ಕಾಮಗಾರಿಯಲ್ಲಿ ದೋಷ ಕಂಡು ಬಂದಕಡೆ ಅಲ್ಲಲ್ಲಿ ಪುನಃ ನಿರ್ಮಾಣಕ್ಕೆ ಕ್ರಮ ಜರುಗಿಸುವ ಕುರಿತು ಭರವಸೆ ನೀಡಿದ ಮೇಲೆ ಮನವಿ ಸಲ್ಲಿಸಿದ ಸಂಘಟನೆಗಳ ಪ್ರಮುಖರು ಜಿಲ್ಲಾಡಳಿತ ಈ ಕುರಿತು ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ಅನಿವಾರ್ಯ ಗುತ್ತದೆ ಎಂದು ಎಚ್ಚರಿಸಿ ಪ್ರತಿಭಟನೆ ಹಿಂಪಡೆದರು.

ನಂತರ ಕಾಮಗಾರಿ ಸ್ಥಳ ಪರಿಶೀಲನೆ ನಡೆಯಿತು. ಪರಿಶೀಲನೆಯಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿರುತ್ತದೆ.
ಸಿಪಿಐ ಪಂಡಿತ್ ಸಗರ ಪಿಡಿಒ ದೇವಿಂದ್ರ ಹೆಗಡೆ, ಪುರಸಭೆ ಸಿಬ್ಬಂದಿ, ಪೋಲಿಸ್ ಸಿಬ್ಬಂದಿ, ಹಸಿರು ಸೇನೆ ಜಿಲ್ಲಾಧ್ಯಕ್ಷ ಬಸನಗೌಡ ಚಿಂಚೋಳಿ ಸೇರಿದಂತೆ ಹಲವು ಸಂಘಟನೆಗಳ ಪದಾಧಿಕಾರಿಗಳು, ಪಟ್ಟಣದ ನಾಗರೀಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here