ಚಿತ್ತಾಪುರ; ಪಟ್ಟಣದ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಕಲಬುರ್ಗಿ ಇವರ ಸಂಯುಕ್ತಾಶ್ರಯದಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಇದೇ ವೆಳೆ ಹಿರಿಯ ಸಿವಿಲ್ ನ್ಯಾಯಾಧೀಶ ಸಂತೋಷ ಪಲ್ಲೇದ್ ಅವರು ಸಸಿಗೆ ನಿರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಫೊಕ್ಸೋ ಕಾಯ್ದೆ ಕುರಿತು ನ್ಯಾಯವಾದಿ ಎಸ್ ಪಿ ಸಾತನೂರಕರ್, ಸಾಮಾನ್ಯ ಕಾನೂನು ಅರಿವು ನೆರವು ಕುರಿತು ಸವಿತಾ ಪಾಟೀಲ್ ಅವರು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಾಧೀಶ ಸಂತೋಷಕುಮಾರ ದೈವಾಜ್ಞ, ಉಪ ತಹಶೀಲ್ದಾರ್ ರಾಜಕುಮಾರ್, ಸಹಾಯಕ ಸರ್ಕಾರಿ ಅಭಿಯೋಜಕ ಅಂಜನಾದೇವಿ ಆರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರತಿ ತುಪ್ಪದ್, ನ್ಯಾಯವಾದಿಗಳ ಸಂಘದ ಅಧ್ಯಕ್ಷ ನಾಗರಾಜ ಕಡಬೂರ್, ಎ.ಎಸ್.ಐ ಬಲವಂತರೆಡ್ಡಿ, ಉದಯಸಾಗರ್, ಮಲ್ಲಿಕಾರ್ಜುನ ಹೊನಗುಂಟಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಸಾರ್ವಜನಿಕರು ಇದ್ದರು.