ಸರ್ಕಾರಿ ನೌಕರರ ಮಹಾ ಸಮ್ಮೇಳನ 27ಕ್ಕೆ

0
38

ಶಹಾಬಾದ: ಫೆಬ್ರವರಿ 27 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಹಾ ಸಮ್ಮೇಳನ ನಡೆಯಲಿದೆ ಎಂದು ಶಹಾಬಾದ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಸಚಿವರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಳೇ ಪಿಂಚಣಿ ಮರು ಜಾರಿ, 7ನೇ ವೇತನ ಆಯೋಗದ ವರದಿಯನ್ನು ಅನುμÁ್ಠನ ಹಾಗೂ ಆರೋಗ್ಯ ಸಂಜೀವಿನಿ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಹೇಳಿದರು.

Contact Your\'s Advertisement; 9902492681

ಅಲ್ಲದೇ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ ನೌಕರರ ಬೇಡಿಕೆಗಳನ್ನು ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು. ಜಿಲ್ಲೆಯ ಹಾಗೂ ತಾಲ್ಲೂಕಿನ ಸರ್ಕಾರಿ ನೌಕರರು ಬೆಂಗಳೂರಿನಲ್ಲಿ ನಡೆಲಿಯುವ ಸಮ್ಮೇಳನಕ್ಕೆ ಭಾಗವಹಿಸಬೇಕೆಂದು ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9008687224 ಸಂಪರ್ಕಿಸಿ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here