ಶಹಾಬಾದ: ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಯಲ್ಲಿಯೇ ಮುಂದಿನ ಜೀವನದ ಬಗ್ಗೆ ನಿರ್ದಿಷ್ಠ ಯೋಜನೆ ರೂಪಿಸಿಕೊಳ್ಳಬೇಕು ಎಂದು ಕಲಬುರಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ್ ಹೇಳಿದರು.
ಅವರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜನೆ ಮಾಡಲಾಗಿದ್ದ 2023-24 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಹಾಗೂ ಬಿಳ್ಕೋಡಿಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಶಿಕ್ಷಣ ಪಡೆದು ಪದವೀಧರನಾಗುವುದರೊಂದಿಗೆ ಪೆÇೀಷಕರಿಗೆ ಗೌರವ ತರುವ ರೀತಿಯಲ್ಲಿ ನಡೆದುಕೊಳ್ಳಬೇಕು. ದೇಶದ ಉತ್ತಮ ಪ್ರಜೆಯಾಗಿ ರೂಪಗೊಳ್ಳಬೇಕು. ಶಿಕ್ಷಣದ ಜೊತೆಗೆ ಸಮಾಜದ ಹಾಗು ತಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಚಿಂತನೆ ನಡೆಸುವಂತವರಾಗಬೇಕು ಎಂದರು.ಶಿಕ್ಷಣ ಎಂಬುವುದು ಮನುಷ್ಯನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುತ್ತದೆಯಾದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಾಜದ ಮಾದರಿ ವ್ಯಕ್ತಿಯಾಗಿ ರೂಪುಗೊಂಡು ದೇಶದ ಬೆನ್ನೆಲುಬಾಗಬೇಕು ಎಂದರು.
ಎಸ್.ಎಸ್.ಮರಗೋಳ ಕಾಲೇಜಿನ ಪ್ರಾಂಶುಪಾಲ ಕೆ.ಬಿ.ಬಿಲ್ಲವ್ ಮಾತನಾಡಿ, ವಿದ್ಯಾರ್ಥಿಗಳಿಗೆ ಯಾವುದೂ ಸುಲಭವಾಗಿ ಸಿಗುವುದಿಲ್ಲ. ಹಾಗಾಗಿ ಕಷ್ಟಪಟ್ಟು ಓದುವುದರ ಜೊತೆಗೆ ಓದಿದ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳುವುದು ಮುಖ್ಯ. ಪರೀಕ್ಷೆಗಳು ಸಮೀಪಿಸಿದಾಗ ಮಾತ್ರ ಓದಿದರೆ ಸಾಲದು ವರ್ಷವಿಡೀ ಓದುವುದನ್ನುರೂಡಿಸಿಕೊಳ್ಳಬೇಕು. ಜ್ಞಾನದ ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು.
ಸರಕಾರಿ ಪ.ಪೂ.ಕಾಲೇಝಿನ ಪ್ರಾಂಶುಪಾಲ ಜಗನ್ನಾಥ ಹೊಸಮನಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಗರೀಕತೆ ಹಾಗು ಮನರಂಜನೆಯ ಹೆಸರಿನಲ್ಲಿ ತಪ್ಪು ದಾರಿ ಹಿಡಿಯಬಾರದು. ಸಭ್ಯ ನಾಗರೀಕ ಸಮಾಜವನ್ನು ನಿರ್ಮಿಸುವುದೇ ಶಿಕ್ಷಣದ ಗುರಿಯಾಗಿದ್ದು , ವಿದ್ಯಾರ್ಥಿಗಳು ನಡೆ-ನುಡಿಯನ್ನು ಒಂದಾಗಿಸಿಕೊಳ್ಳುವ ಮೂಲಕ ಉತ್ತಮ ನಾಗರಿಕರಾಗಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಬಿ.ಜಿ.ಗೊಳೇದ್ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಮಾದರ, ಸರಕಾರಿ ಕೈಗಾರಿಕೆ ತರಬೇತಿ ಕೇಂದ್ರದ ಅಧಿಕಾರಿ ಮೌಲಾ ಸಾಹೇಬ, ಸರಕಾರಿ ಪ್ರೌಢಶಾಲೆ ಮುಖ್ಯಗುರು ಏಮನಾಥ ರಾಠೋಡ ವೇದಿಕೆಯ ಮೇಲಿದ್ದರು.
ಕಲಬುರಗಿ ಸಪರ್ ಮಾರ್ಕೆಟನಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಂಶೋದ್ದಿನ್ ಪಟೇಲ್ ಹಾಗೂ ಉಪನ್ಯಾಸಕ ಚಿತಂಬರಾವ್ ಮೇತ್ರಿ ಅವರನ್ನಿ ಸನ್ಮಾನಿಸಲಾಯಿತು.
ಉಪನ್ಯಾಸಕರಾದ ಮಹಾದೇವ ಪಾಟೀಲ, ಅಂಬಿಕಾ ಹಂಗರಗಿ, ರವಿ ಚವ್ಹಾಣ, ಬಸವರಾಜ ಕೊಳಕೂರ ಇತರರು ಇದ್ದರು.