ಕೆಂಭಾವಿಯಲ್ಲಿ ಮಾರ್ಚ್ 2 ರಂದು ಸಾರ್ವಜನಿಕ ಕುಂದು ಕೊರತೆ ಸಭೆ

0
21

ಸುರಪುರ: ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಮಾರ್ಚ್ 2ನೇ ತಾರಿಖು ಸಾರ್ವಜನಿಕರ ಕುಂದು ಕೊರತೆ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ತಾ.ಪಂ ಇಓ ಬಸವರಾಜ ಸಜ್ಜನ್ ತಿಳಿಸಿದರು.

ನಗರದ ತಹಸಿಲ್ದಾರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿ,ಮಾರ್ಚ್ 2 ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಸಭೆ ಹಮ್ಮಿಕೊಳ್ಳಲಾಗಿದ್ದು ಜಿಲ್ಲಾಧಿಕಾರಿಗಳಾದ ಡಾ:ಸುಶೀಲಾ ಬಿ ಅವರು ಅಧ್ಯಕ್ಷತೆ ವಹಿಸಲಿದ್ದು,ಜಿಲ್ಲಾ ಉಸ್ತುವಾರಿ ಹಾಗೂ ಕರ್ನಾಟಕ ಸರಕಾರದ ಸಣ್ಣ ಕೈಗಾರಿಕೆಗಳ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಘನ ಉಪಸ್ಥಿತಿಯಲ್ಲಿ ಸಭೆ ನಡೆಯಲಿದ್ದು,ಈ ಸಂದರ್ಭದಲ್ಲಿ ಕೆಂಭಾವಿ ಹೋಬಳಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಅಹವಾಲು ಸಲ್ಲಿಸಬಹುದು,ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

Contact Your\'s Advertisement; 9902492681

ಮಾರ್ಚ್ 2 ರಂದು ಬೆಳಿಗ್ಗೆ 10 ಗಂಟೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ಸಾರ್ವಜನಿಕರು ಅಹವಾಲು,ಅರ್ಜಿಗಳನ್ನು ಸ್ವೀಕರಿಸಬೇಕು ಎಂದು ತಿಳಿಸಿದರು.ಸಾರ್ವಜನಿಕರು ಸಭೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಸಿಡಿಪಿಓ ಅನಿಲಕುಮಾರ್ ಕಾಂಬ್ಳೆ,ಕ್ಷೇತ್ರ ಸಮನ್ವಯಾಧಿಕಾರಿ ಪಂಡಿತ ನಿಂಬೂರ,ಕೆಂಭಾವಿ ಉಪ ತಹಸಿಲ್ದಾರ ಮಲ್ಲಿಕಾರ್ಜುನ ಪಾಟೀಲ್,ಕುಡಿಯುವ ನೀರು ಸರಬರಾಜು ಇಲಾಖೆಯ ಕಾವೇರಿ,ಪಶುಸಂಗೋಪನಾ ಇಲಾಖೆಯ ಶರಣಪ್ಪ,ಮೀನುಗಾರಿಕೆ ಇಲಾಖೆಯ ಅಂಬ್ರೇಶ ಸೇರಿದಂತೆ ಕೇವಲ ಕೆಲವೇ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದು,ಮುಖ್ಯವಾದ ಇಲಾಖೆಗಳ ಅಧಿಕಾರಿಗಳ ಗೈರು ಸಭೆಯಲ್ಲಿ ಎದ್ದು ಕಾಣುತ್ತಿತ್ತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here