ಕಲಬುರಗಿ; ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ (ಹೋಂ ಗಾಡ್) ಭರ್ತಿಗಾಗಿ ಅರ್ಜಿ ಆಹ್ವಾನ

0
20

ಕಲಬುರಗಿ; ಖಾಲಿಯಿರುವ ಗೃಹರಕ್ಷಕರ ಸ್ವಯಂ ಸೇವಕ (ಹೋಂ ಗಾರ್ಡ್) ಸದಸ್ಯರನ್ನು ಭರ್ತಿ ಮಾಡಿಕೊಳ್ಳಲು ಕಲಬುರಗಿ ಜಿಲ್ಲಾ ವ್ಯಾಪ್ತಿಗೊಳಪಡುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಕಲಬುರಗಿ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ಪುರುಷರು 168 ಸೆ.ಮೀ. ಹಾಗೂ ಮಹಿಳೆಯರು 157 ಸೆ.ಮೀ. ಎತ್ತರ ಹೊಂದಿರಬೇಕು. ಇತರೆ ಕೌಶ್ಯಲ್ಯ ತರಬೇತಿ ಪಡೆದಿದ್ದಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಅರ್ಹ ಅಭ್ಯರ್ಥಿಗಳು ಕಲಬುರಗಿಯ ರಾಜಾಪುರ ಕುಸನೂರ ರಸ್ತೆ ಸರ್ಕಾರಿ ಡಿಗ್ರಿ ಕಾಲೇಜು ಹಿಂದುಗಡೆಯಿರುವ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರ ಕಚೇರಿಯಿಂದ ಮಾರ್ಚ್ 4 ರೊಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಉಚಿತವಾಗಿ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ 2024ರ ಮಾರ್ಚ್ 5 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-245735 ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here