ಕಲಬುರಗಿ: ಭಾರತ ಪೋಲಿಯೋ ಮುಕ್ತ ದೇಶವಾಗಿದ್ದು, ಜಗತ್ತಿಗೆ ಮಾದರಿಯಾಗಿದೆ. ಮಾರಕ ಅಂಗವಿಕಲತೆ ರೋಗದ ಮುಂಜಾಗ್ರತೆ ಹಾಗೂ ಪರಿಶ್ರಮದಿಂದ ಪೋಲಿಯೋ ಮುಕ್ತ ರಾಷ್ಟ್ರ ಎಂದು ಹೆಸರುವಾಸಿಯಾಗಿದೆ ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಕರೆ ನೀಡಿದರು.
ಭಾನುವಾರ ನಗರದ ಹೀರಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರ್ ಸಿ ಹೆಚ್ ವಿಭಾಗದ ಸಂಯುಕ್ತಾಶ್ರಯದಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಯಾರೊಬ್ಬರೂ ಅಂಗವಿಕಲತೆ ಹೊಂದಬಾರದು ಎನ್ನುವ ಸದುದ್ದೇಶದಿಂದ ಸರಕಾರ ಫೋಲಿಯೋ ಲಸಿಕೆ ಹಾಕಿಸುವ ಅಭಿಯಾನ ಹಮ್ಮಿಕೊಂಡಿದೆ. ಇದರ ಉಪಯೋಗ ಪ್ರತಿಯೊಬ್ಬರು ಮಕ್ಕಳು ಪಡೆದುಕೊಳ್ಳಬೇಕು. ಜಿಲ್ಲೆಯ ಎಲ್ಲಾ ತಾಯಿಂದಿರು ಮನೆಯಲ್ಲಿ ಕುಡದೆ ಹೊರಗೆ ಬಂದು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ತಪ್ಪದೇ ಹಾಕಿಸಬೇಕು ಎಂದು ಸಾರ್ವಜನಿಕರಲ್ಲಿ ಕಳಕಳಿಯ ಮನವಿ ಮಾಡಿದರು.
ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಶ್ವಾಶತವಾಗಿ ಪೋಲಿಯೋ ಮುಕ್ತ ಜಿಲ್ಲೆ ಮಾಡಲು ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ಮುತವರ್ಜಿ ವಹಿಸಿ ಕೆಲಸ ಮಾಡುತ್ತಿವೆ. ಈ ನಿಟ್ಟಿನಲ್ಲಿ ಪೊಲೀಸ್ ಲಸಿಕೆ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.
ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮಾತನಾಡಿ, ಜಿಲ್ಲೆಯಲ್ಲಿ ಐದು ವರ್ಷದೊಳಗಿನ 3,41,951 ಮಕ್ಕಳಿದ್ದಾರೆ. ಇವರೆಗೂ ಮನೆಯಲ್ಲಿ ಕೆಲ ಮಕ್ಕಳಿಗೆ ಹಾಕದೆ ಇರುವಂತ ಮಕ್ಕಳಿಗೆ ಲಸಿಕೆ ಹಾಕಿಸಬೇಕು. 17 ಲಸಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ಸಿಬ್ಬಂದಿ, ಮೇಲ್ವಿಚಾರಕು, ಆಶಾ ಕಾರ್ಯಕರ್ತೆಯರು, ಸಂಚಾರಿ ಸ್ಥಳಗಳಲ್ಲಿ, ತಂಗುದಣಗಳಲ್ಲಿ ಹಾಗೂ ಮನೆ ಮನೆ ಭೇಟಿ ಮಾಡಿ ಲಸಿಕೆ ಹಾಕುತ್ತಾರೆ. ಮೂರು ದಿನಗಳ ವರೆಗೂ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ಮಾತನಾಡಿ, ಪೋಲಿಯೋ ಅಭಿಯಾನದಲ್ಲಿ ಭಾರತ ಬೇರೆ ದೇಶಗಳಿಗೆ ಮಾದರಿಯಾಗಿದೆ. ಅಧಿಕಾರಿಗಳು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು. ಪಲ್ಸ್ ಪೋಲಿಯೋ ಲಸಿಕೆಯಿಂದ ಮಕ್ಕಳು ವಂಚಿತರಾಗಬಾರದು. ಇಂದಿಲ್ಲಿ ಭೂತ ಮಟ್ಟದಲ್ಲಿ ಪೋಲಿಯೋ ಲಸಿಕೆ ನೀಡಲಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತದೆ. ಇದರ ಲಾಭ ಎಲ್ಲರೂ ಪಡೆಯಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಅಲಿಮೋದ್ದಿನ ಪಟೇಲ್, ಪೋಲಿಯೋ ಸರ್ವೇಕ್ಷಣಾ ಅಧಿಕಾರಿಗೆ ಡಾ.ಅನಿಲಕುಮಾರ ತಾಳಿಕೋಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರತಿಕಾಂತ ವಿ ಸ್ವಾಮಿ, ಆರ್.ಸಿ.ಹೆಚ್. ಅಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ, ಕಲಬುರಗಿ ನಗರ ಮತ್ತು ಗ್ರಾಮೀಣ ತಾಲೂಕು ಆರೋಗ್ಯಾಧಿಕಾರಿಗಳಿ ಡಾ. ಮಾರುತಿ ಕಾಂಬಳೆ, ಆಡಳಿತಾಧಿಕಾರಿ ಸುನೀತಾ ಜಾಧವ ಸೇರಿ ಜಿಲ್ಲಾಮಟ್ಟದ ಅಧಿಕಾರಿಗಳು ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು.