ಶಹಾಬಾದ: ಪೋಲಿಯೋ ಮುಕ್ತ ಭಾರತ ನಿರ್ಮಾಣಕ್ಕಾಗಿ ತಪ್ಪದೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವಂತೆ ತಾಲೂಕಾ ಆರೋಗ್ಯ ಕೇಂದ್ರದ ಪಲ್ಸ್ ಪೋಲಿಯೋ ಅಭಿಯಾನದ ನೋಡಲ್ ಅಧಿಕಾರಿ ಡಾ.ಚಂದ್ರಕಾಂತ ನರಿಬೋಳ ಹೇಳಿದರು.
ಅವರು ರವಿವಾರ ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ಪಲ್ಸ್ ಪೋಲಿಯೋಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಒಂದು ಹನಿ ಲಸಿಕೆ ಮಗುವಿನ ಅಂಗವೈಕಲ್ಯತೆಯನ್ನು ಹೋಗಲಾಡಿಸುತ್ತದೆ.ಲಸಿಕೆ ನೀಡುವುದರಿಂದ ಯಾವುದೇ ಅಡ್ಡಪರಿಣಾಮವಿಲ್ಲ ಹಾಗೂ ಯಾವುದೇ ತೊಂದರೆಯಾಗುವುದಿಲ್ಲ.ಪಾಲಕರು ತಮ್ಮ ಮಕ್ಕಳಿಗೆ ಈ ಮೊದಲು ಪೋಲಿಯೋ ಹನಿ ಹಾಕಿಸಿದ್ದರೂ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಬೇಕು. ಮಾ.03 ರಿಂದ ಮೂರು ದಿನಗಳ ಕಾಲ ಪಲ್ಸ್ ಪೋಲಿಯೋ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಪೆÇೀಲಿಯೋ ಮುಕ್ತ ದೇಶವನ್ನಾಗಿ ಮಾಡಲು ಐದು ವರ್ಷದ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಹಾಕಿಸಬೇಕು ಈ ಒಂದು ಅಭಿಯಾನದಲ್ಲಿ ಎಲ್ಲಾ ಪಾಲಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಕೈಜೋಡಿಸಬೇಕೆಂದು ತಿಳಿಸಿದರು.
ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಬ್ದುಲ್ ರಹೀಮ್ ಮಾತನಾಡಿ, ನಿಮ್ಮ ಮಗುವಿನ ಆರೋಗ್ಯದ ದೃಷ್ಟಿಯಿಂದ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ.ಸರಕಾರದ ಯೋಜನೆಗಳನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಡಾ.ಜಮೀಲ್, ಯುಸೂಫ್ ನಾಕೇದಾರ,ಡಾ.ಶಂಕರ, ಡಾ.ಸಂಧ್ಯಾರಾಣಿ,ಜವೇರಿಯಾ,ಇಕ್ಬಾಲ್ ಇತರರು ಇದ್ದರು.